ಲಿಂಗಾಯತ ಅಧಿಕಾರಿಗಳಿಗೆ ಯಾವುದೇ ಸಮಸ್ಯೆ ಆಗಿಲ್ಲ: ಶಾಮನೂರು ಪುತ್ರ ಸಚಿವ ಮಲ್ಲಿಕಾರ್ಜುನ ಸ್ಪಷ್ಟನೆ

Prasthutha|

ಬೆಂಗಳೂರು: ನಮ್ಮ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಯಾವುದೇ ಸಮಸ್ಯೆ ಆಗಿಲ್ಲ ಎಂದು ಗಣಿ ಸಚಿವ ಎಸ್​.ಎಸ್.ಮಲ್ಲಿಕಾರ್ಜುನ್ ಹೇಳಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ಬಗ್ಗೆ ತಂದೆ ಶಾಮನೂರು ಶಿವಶಂಕರಪ್ಪ ರನ್ನೇ ಕೇಳಿ, ಅವರ ವೈಯಕ್ತಿಕ ವಿಚಾರ ಏನೂ ಎಂದು ಗೊತ್ತಿಲ್ಲ. ತಂದೆಯವರ ಜೊತೆಗೆ ನಾನು ಮಾತನಾಡಿಲ್ಲ. ಈ ವಿಷಯ ಕುರಿತು ಸಿಎಂ ಹಾಗೂ ತಂದೆ ಶಾಮನೂರು ಶಿವಶಂಕರಪ್ಪ ಅವರೇ ಮಾತಾಡಿಕೊಳ್ಳುತ್ತಾರೆ. ಇದು ಮುಗಿದು ಹೋದ ಅಧ್ಯಾಯ ಎಂದು ತಮ್ಮ ಅಭಿಪ್ರಾಯವನ್ನು ಸ್ಪಷ್ಟಪಡಿಸಿದ್ದಾರೆ.

Join Whatsapp