ವಾಲ್ಮೀಕಿ ನಿಗಮ ಅವ್ಯವಹಾರ ಪ್ರಕರಣ | ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

Prasthutha|

ಬೆಂಗಳೂರು: ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನೇದ ಅವ್ಯವಹಾರ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

- Advertisement -


ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ರಚಿಸಲಾಗಿದ್ದು ತನಿಖೆ ಚುರುಕಾಗಿ ನಡೆಯುತ್ತಿದೆ ಎಂದರು.


ಬಿಜೆಪಿಯವರು ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ನ್ಯಾಯಾಲಯಕ್ಕೆ ಹಾಜರಾದ ಮುಖ್ಯಮಂತ್ರಿ ಈ ಬಗ್ಗೆ ಪ್ರತಿಕ್ರಿಯಿಸಿ, ‘ಸಿವಿಲ್ ಸ್ವರೂಪದ ಪ್ರಕರಣ ಇದಾಗಿದೆ. ಕಾನೂನು ರಕ್ಷಕರಾಗಿ, ಪಾಲಕರಾಗಿ ನ್ಯಾಯಾಲಯದ ಸೂಚನೆ ಮೇರೆಗೆ ನಾನು ನ್ಯಾಯಾಧೀಶರ ಮುಂದೆ ಹಾಜರಾಗಿದ್ದೇನೆ. ಜಾಮೀನು ಪಡೆದಿದ್ದೇನೆ’ ಎಂದರು.



Join Whatsapp