Home ಟಾಪ್ ಸುದ್ದಿಗಳು ವಾಲ್ಮೀಕಿ ನಿಗಮ ಅವ್ಯವಹಾರ ಪ್ರಕರಣ | ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

ವಾಲ್ಮೀಕಿ ನಿಗಮ ಅವ್ಯವಹಾರ ಪ್ರಕರಣ | ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನೇದ ಅವ್ಯವಹಾರ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.


ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ರಚಿಸಲಾಗಿದ್ದು ತನಿಖೆ ಚುರುಕಾಗಿ ನಡೆಯುತ್ತಿದೆ ಎಂದರು.


ಬಿಜೆಪಿಯವರು ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ನ್ಯಾಯಾಲಯಕ್ಕೆ ಹಾಜರಾದ ಮುಖ್ಯಮಂತ್ರಿ ಈ ಬಗ್ಗೆ ಪ್ರತಿಕ್ರಿಯಿಸಿ, ‘ಸಿವಿಲ್ ಸ್ವರೂಪದ ಪ್ರಕರಣ ಇದಾಗಿದೆ. ಕಾನೂನು ರಕ್ಷಕರಾಗಿ, ಪಾಲಕರಾಗಿ ನ್ಯಾಯಾಲಯದ ಸೂಚನೆ ಮೇರೆಗೆ ನಾನು ನ್ಯಾಯಾಧೀಶರ ಮುಂದೆ ಹಾಜರಾಗಿದ್ದೇನೆ. ಜಾಮೀನು ಪಡೆದಿದ್ದೇನೆ’ ಎಂದರು.

Join Whatsapp
Exit mobile version