ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಡಿಕೆ ಶಿವಕುಮಾರ್

Prasthutha|

ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಇಂದು ಹೈಕೋರ್ಟ್ ವಜಾಗೊಳಿಸಿದ್ದರೂ ಸಿದ್ದರಾಮಯ್ಯ ಅವರಿಗೆ ಸಂಪುಟ ಸಹೋದ್ಯೋಗಿಗಳಿಂದ ಸಂಪೂರ್ಣ ಬೆಂಬಲ ವ್ಯಕ್ತವಾಗುತ್ತಿದ್ದು, ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಅಗತ್ಯ ಇಲ್ಲ ಎಂದಿದ್ದಾರೆ.

- Advertisement -

ಹೈಕೋರ್ಟ್ ತೀರ್ಪು ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಇದು ಬಿಜೆಪಿಯ ರಾಜಕೀಯ ಪಿತೂರಿಯಾಗಿದ್ದು, ಸಿದ್ದರಾಮಯ್ಯ ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದರು. ಅವರು ಯಾವುದೇ ತಪ್ಪು ಮಾಡಿಲ್ಲ. ಅವರು ಯಾವುದೇ ಹಗರಣದಲ್ಲಿ ಭಾಗಿಯಾಗಿಲ್ಲ. ಇದು ದೇಶದ ಎಲ್ಲಾ ವಿಪಕ್ಷಗಳ ನಾಯಕರ ವಿರುದ್ಧ ಬಿಜೆಪಿಯ ರಾಜಕೀಯ ಪಿತೂರಿಯಾಗಿದೆ. ಬಿಜೆಪಿಯವರು ತೊಂದರೆ ಸೃಷ್ಟಿಸುತ್ತಿದ್ದಾರೆ. ನಾವು ಸಿದ್ದರಾಮಯ್ಯ ಹಿಂದೆ ನಿಂತಿದ್ದು, ಅವರನ್ನು ಬೆಂಬಲಿಸುತ್ತೇವೆ. ಅವರು ದೇಶ, ಪಕ್ಷ ಹಾಗೂ ರಾಜ್ಯಕ್ಕಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದರು.

ಹೈಕೋರ್ಟ್ ತೀರ್ಪಿನಿಂದ ಸಿದ್ದರಾಮಯ್ಯಗೆ ಹಿನ್ನಡೆಯಾಗಿದೆ ಎಂಬುದರ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ಶಿವಕುಮಾರ್, ಕಾಂಗ್ರೆಸ್ ನ ಎಲ್ಲಾ ನಾಯಕರ ವಿರುದ್ಧದ ದೊಡ್ಡ ಪಿತೂರಿ ನಡೆಯುತ್ತಿದೆ ಎಂದು ಪುನರುಚ್ಚರಿಸಿದರು. ಆದಾಗ್ಯೂ, ದೇಶದ ನ್ಯಾಯಾಂಗ ವ್ಯವಸ್ಥೆಗೆ ಪಕ್ಷ ಗೌರವ ನೀಡುತ್ತದೆ ಎಂದು ಹೇಳಿದರು.



Join Whatsapp