Home ಟಾಪ್ ಸುದ್ದಿಗಳು ಪ್ರಜ್ವಲ್ ರೇವಣ್ಣ ಬಗ್ಗೆ ಸಹಾನುಭೂತಿಯ ಪ್ರಶ್ನೆಯೇ ಇಲ್ಲ: ಪ್ರಲ್ಹಾದ್ ಜೋಶಿ

ಪ್ರಜ್ವಲ್ ರೇವಣ್ಣ ಬಗ್ಗೆ ಸಹಾನುಭೂತಿಯ ಪ್ರಶ್ನೆಯೇ ಇಲ್ಲ: ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ: ಅಶ್ಲೀಲ ವಿಡಿಯೋ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪರ ಸಹಾನುಭೂತಿಯ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.


ಹುಬ್ಬಳ್ಳಿಯ ವಿವೇಕಾನಂದ ಕಾಲೋನಿಯಲ್ಲಿರುವ ಚಿನ್ಮಯ ವಿದ್ಯಾಲಯದಲ್ಲಿ ಸ್ಥಾಪಿಸಲಾಗಿದ್ದ ಮತದಾನ ಕೇಂದ್ರದಲ್ಲಿ ಮತದಾನ ಮಾಡಿದ ನಂತರ ಮಾತನಾಡಿದ ಅವರು, ನಮಗೆ ಮಹಿಳೆಯರ ಬಗ್ಗೆ ಹೆಚ್ಚು ಕಾಳಜಿ ಇದೆ. ಮಹಿಳೆಯರಿಗೆ ಆಗಿರುವ ಅನ್ಯಾಯದ ಬಗ್ಗೆ ತನಿಖೆ ನಡೆಸಬೇಕು. ಪ್ರಜ್ವಲ್ ಬಗ್ಗೆ ಸಹಾನುಭೂತಿ ಹೊಂದುವ ಪ್ರಶ್ನೆಯೇ ಇಲ್ಲ ಎಂದರು. ಹಾಸನದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ದೇವರಾಜೇಗೌಡ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಜೋಶಿ, ಅವರ (ಡಿಕೆ ಶಿವಕುಮಾರ್) ಪಾತ್ರದ ಮೇಲಿನ ಆರೋಪವನ್ನು ಎಸ್ಐಟಿ ತನಿಖೆ ಮಾಡಬೇಕು ಎಂದರು.

Join Whatsapp
Exit mobile version