ಹೊಸದಿಲ್ಲಿ: ವ್ಯಾಕ್ಸಿನ್ ಹಾಕಿಸಿಕೊಳ್ಳದ ಕುಟುಂಬಗಳಿಗೆ ಪಡಿತರ ಸಾಮಗ್ರಿಗಳನ್ನು ನೀಡದಿರಲು ಮಧ್ಯಪ್ರದೇಶ ಸರ್ಕಾರ ನಿರ್ಧರಿಸಿದೆ.ಪ್ರತಿಯೊಬ್ಬ ರೇಷನ್ ಕಾರ್ಡದಾರರು ಎರಡೂ ಡೋಸ್ ಲಸಿಕೆ ಪಡೆಯುವುದು ಕಡ್ಡಾಯ.
ಗ್ರಾಹಕರು ಈ ನಿಯಮ ಪಾಲಿಸಿದ್ದಾರೆಯೇ ಇಲ್ಲವೇ ಎಂದು ಪರಿಶೀಲಿಸಿ ಅದನ್ನು ಖಾತರಿಪಡಿಸುವುದು ರೇಷನ್ ಅಂಗಡಿಯವರ ಜವಾಬ್ದಾರಿಯಾಗಿದೆ ಎಂದು ಸರ್ಕಾರದ ಮಾರ್ಗಸೂಚಿ ತಿಳಿಸಿದೆ. ಪಡಿತರ ಚೀಟಿದಾರರು ಮೊದಲ ಅಥವಾ ಎರಡನೇ ಡೋಸ್ ಲಸಿಕೆ ಪಡೆಯದಿದ್ದರೆ ಅಂಥವರಿಗೆ ಆಹಾರ ಸಾಮಗ್ರಿಗಳನ್ನು ವಿತರಿಸಬಾರದು ಎಂದು ಹೊಸ ಆದೇಶ ತಿಳಿಸಿದೆ.