ಆನಂದ್ ಸಿಂಗ್ ಒಳ್ಳೆಯ ಮುಹೂರ್ತಕ್ಕೆ ಕಾಯುತ್ತಿದ್ದರು: ಆರ್.ಅಶೋಕ

Prasthutha|

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದಲ್ಲಿ ಯಾವುದೇ ಅಸಮಾಧಾನವಿಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರವಾಸೋದ್ಯಮ ಸಚಿವರಾಗಿ ವಿಜಯನಗರ ಶಾಸಕ ಆನಂದ್ ಸಿಂಗ್ ಅಧಿಕಾರ ಸ್ವೀಕರಿಸಿದ್ದಾರೆ. ಇದು ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂಬುದನ್ನು ಸೂಚಿಸುತ್ತದೆ ಎಂದರು.

- Advertisement -


“ನಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ. ಆನಂದಸಿಂಗ್ ಒಳ್ಳೆಯ ಮುಹೂರ್ತಕ್ಕೆ ಕಾಯುತ್ತಿದ್ದರು. ನಾನು ಈ ಹಿಂದೆ ಅವರನ್ನು ಭೇಟಿಯಾಗಿದ್ದೆ, ಆಗ ಸಮಸ್ಯೆ ಹೇಳಿಕೊಂಡಿದ್ದರು. ಮಾನ್ಯ ಮುಖ್ಯಮಂತ್ರಿಗಳೊಂದಿಗೂ ಚರ್ಚೆ ನಡೆಸಿದ್ದೇವೆ. ಸಿಎಂ ಒಂದು ಅಥವಾ ಎರಡು ದಿನಗಳಲ್ಲಿ ನವದೆಹಲಿಗೆ ಭೇಟಿ ನೀಡುವ ಸಾಧ್ಯತೆಯಿದೆ. ಅಲ್ಲಿ ಅವರು ಸಿಂಗ್ ಜೊತೆಗಿನ ಚರ್ಚೆಯನ್ನು ಪಕ್ಷದ ಹೈಕಮಾಂಡ್ಗೆಾ ತಲುಪಿಸುತ್ತಾರೆ. ಪಕ್ಷದಲ್ಲಿ ಅಸಮಾಧಾನವೇನು ಇಲ್ಲ ಎಂದರು.


ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರವು ಉತ್ತಮ ಕೆಲಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಪರಿಣಾಮಕಾರಿ ಆಡಳಿತ ನೀಡಲಾಗುವುದು” ಎಂದು ಆರ್ ಅಶೋಕ ಹೇಳಿದರು.

Join Whatsapp