ಪೆಟ್ರೋಲ್‌, ಡೀಸೆಲ್‌ ದರ ಇಳಿಕೆ ಇಲ್ಲ: ಕೇಂದ್ರ ಸರಕಾರ

Prasthutha|

- Advertisement -

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಕಡಿತಗೊಳಿಸುವ ಯಾವುದೇ ಪ್ರಸ್ತಾವವು ಕೇಂದ್ರ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್‌ದೀಪ್ ಸಿಂಗ್ ಪುರಿ ಹೇಳಿದ್ದಾರೆ.

- Advertisement -

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಚ್ಚಾ ತೈಲ ದರಕ್ಕೆ ಸಂಬಂಧಿಸಿದಂತೆ ನಾವು ಪ್ರಕ್ಷುಬ್ಧ ಎದುರಿಸುತ್ತಿದ್ದೇವೆ. ಹಾಗಾಗಿ, ಇಂಧನ ಬೆಲೆ ಇಳಿಕೆಗೆ ಸಂಬಂಧಿಸಿದಂತೆ ತೈಲ ಮಾರಾಟ ಕಂಪನಿಗಳ ಜೊತೆಗೆ ಸರ್ಕಾರ ಯಾವುದೇ ಚರ್ಚೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಷೇರು ಮಾರುಕಟ್ಟೆಯಲ್ಲಿ ಪೆಟ್ರೋಲಿಯಂ ಷೇರಿನ ಮೌಲ್ಯದ ಶೇ1.07ರಷ್ಟು ಏರಿಕೆಯಾಗಿದೆ ಎಂದು ತಿಳಿಸಿದ ಅವರು,ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿತವಾಗಲಿದೆ ಎಂದು ವದಂತಿಯಿಂದಾಗಿ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಷೇರುಗಳು ಕೆಲವು ದಿನಗಳಿಂದ ಒತ್ತಡಕ್ಕೆ ಸಿಲುಕಿವೆ ಎಂದರು.

:

Join Whatsapp