ಮಹಾರಾಷ್ಟ್ರ | ಬಂಧನ ಪ್ರಶ್ನಿಸಿ ನವಾಬ್ ಮಲಿಕ್ ಸಲ್ಲಿಸಿದ್ದ ಅರ್ಜಿ ಸುಪ್ರೀಮ್ ಕೋರ್ಟ್ ವಜಾ

Prasthutha|

ಮುಂಬೈ: ಅಕ್ರಮ ಹಣ ವಾರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಇಡಿ ಅಧಿಕಾರಿಗಳಿಂದ ತನ್ನ ಬಂಧನವನ್ನು ಪ್ರಶ್ನಿಸಿ ಸಚಿವ ನವಾಬ್ ಮಲಿಕ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಮ್ ಕೋರ್ಟ್ ವಜಾಗೊಳಿಸಿದೆ.

- Advertisement -

ಪ್ರಕರಣವು ಆರಂಭಿಕ ವಿಚಾರಣಾ ಹಂತದಲ್ಲಿದ್ದು, ಜಾಮೀನಿಗಾಗಿ ವಿಶೇಷ ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಪೀಠ, ಹಿರಿಯ ವಕೀಲ ಕಪಿಲ್ ಸಿಬಲ್ ಗೆ ತಿಳಿಸಿದೆ.

1999 ರಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನವಾಬ್ ಮಲಿಕ್ ಅವರನ್ನು ಬಂಧಿಸಲಾಗಿದೆ ಎಂದು ಸಿಬಲ್ ವಾದಿಸಿದ್ದಾರೆ.
ವಿಶೇಷ ನ್ಯಾಯಾಧೀಶರು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣವನ್ನು ಪರಿಗಣಿಸುವುದಿಲ್ಲ ಎಂದು ಕಪಿಲ್ ಸಿಬಲ್ ಸುಪ್ರೀಮ್ ಕೋರ್ಟ್ ಗೆ ತಿಳಿಸಿದ್ದಾರೆ.

- Advertisement -

ಅದ್ಯಾಗ್ಯೂ, ಬಾಂಬೆ ಹೈಕೋರ್ಟ್ ತೀರ್ಪಿನ ವಿರುದ್ಧ ಮಲಿಕ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ಈ ಹಿಂದೆ ವಜಾಗೊಳಿಸಿತ್ತು. ಇಡಿ ಇಲಾಖೆ ತನ್ನನ್ನು ಕಾನೂನುಬಾಹಿರವಾಗಿ ಬಂಧಿಸಿದೆ ಎಂದು ಉಲ್ಲೇಖಿಸಿ ನವಾಬ್ ಮಲಿಕ್ ಸಲ್ಲಿಸಿದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿತ್ತು.



Join Whatsapp