Home ಟಾಪ್ ಸುದ್ದಿಗಳು ಅನ್ನ ಭಾಗ್ಯಕ್ಕೆ ಅಕ್ಕಿ ಇಲ್ಲ, ಧರ್ಮದ ಹೆಸರಲ್ಲಿ ಮನೆ ಮನೆಗೆ ಅಕ್ಷತೆ: ಸಚಿವ ಮಹದೇವಪ್ಪ ಟೀಕೆ

ಅನ್ನ ಭಾಗ್ಯಕ್ಕೆ ಅಕ್ಕಿ ಇಲ್ಲ, ಧರ್ಮದ ಹೆಸರಲ್ಲಿ ಮನೆ ಮನೆಗೆ ಅಕ್ಷತೆ: ಸಚಿವ ಮಹದೇವಪ್ಪ ಟೀಕೆ

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡದ ಕೇಂದ್ರ ಸರ್ಕಾರ ಧರ್ಮದ ಹೆಸರಲ್ಲಿ ಅಕ್ಷತೆಯ ಗಂಟನ್ನು ಮನೆ ಮನೆಗೆ ಕಳಿಸುತ್ತಿರುವುದು ನೈಜ ಧರ್ಮದ ಕಲ್ಪನೆಗೆ ವಿರುದ್ಧವಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಹಸಿವು ಮುಕ್ತ ಕರ್ನಾಟಕದ ಉದ್ದೇಶದಿಂದ ಜಾರಿಗೊಳಿಸಿದ್ದ ಅನ್ನಭಾಗ್ಯ ಯೋಜನೆಗೆ ಹೆಚ್ಚಿನ ಹಣ ನೀಡಿ ಕೊಂಡುಕೊಳ್ಳುತ್ತೇವೆ ಎಂದಾಗಲೂ ಕೇಂದ್ರದಿಂದ ಅಕ್ಕಿ ನೀಡದವರು ಈ ದಿನ ಧರ್ಮದ ಹೆಸರಲ್ಲಿ ಅಕ್ಷತೆಯ ಗಂಟನ್ನು ಮನೆ ಮನೆಗೆ ಕಳಿಸುತ್ತಿರುವುದು ನೈಜ ಧರ್ಮದ ಕಲ್ಪನೆಗೆ ವಿರುದ್ಧವಾಗಿದೆ. ಬಡವರ ಹಸಿವಿಗೆ ಅನ್ನ ನೀಡುವುದಕ್ಕಿಂತಲೂ ದೊಡ್ಡ ಧರ್ಮ ಇದೆಯೇ ಎಂದು ಪ್ರಶ್ನಿಸಿದ್ದಾರೆ.

ಬಡವರ ಹಸಿವಿಗೆ ನೀಡುವ ಅನ್ನದ ವಿಷಯದಲ್ಲೂ ರಾಜಕೀಯ ಮಾಡುವಂತಹ ಅಮಾನವೀಯ ಪ್ರವೃತ್ತಿ ತೋರಿದ ಇವರು ಧರ್ಮದ ಕುರಿತಂತೆ ಮಾತನಾಡುತ್ತಿದ್ದರೆ ಅದನ್ನು ಕಂಡು ನಗಬೇಕೋ ಅಳಬೇಕೋ ಎಂದು ನನಗೆ ತಿಳಿಯುತ್ತಿಲ್ಲ.

Join Whatsapp
Exit mobile version