ಭಾರತದ ನೈಟ್ ಕರ್ಫ್ಯೂಗೆ ವೈಜ್ಞಾನಿಕ ಆಧಾರಗಳಿಲ್ಲ: WHO ವಿಜ್ಞಾನಿ

Prasthutha|


ಹೊಸದಿಲ್ಲಿ: ಭಾರತದಲ್ಲಿ ವಿಧಿಸಲಾಗಿರುವ ನೈಟ್ ಕರ್ಫ್ಯೂಗೆ ವೈಜ್ಞಾನಿಕ ಆಧಾರಗಳಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ(WHO) WHO ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಹೇಳಿದ್ದಾರೆ.

- Advertisement -


ಈ ಕುರಿತು ಟಿವಿ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ನೈಟ್ ಕರ್ಫ್ಯೂ ಹೇರುವುದರಿಂದ ಕೊರೊನಾ ವೈರಸ್‌ನ ರೂಪಾಂತರಗಳ ಹರಡುವಿಕೆ ತಡೆಯಬಹುದು ಎಂಬುದಕ್ಕೆ ವೈಜ್ಞಾನಿಕ ಆಧಾರಗಳಿಲ್ಲ ಎಂದು ಹೇಳಿದ್ದಾರೆ.

ಸೋಂಕು ಹರಡುವುದನ್ನು ತಡೆಯಲು ಭಾರತದಂತಹ ದೇಶಗಳು ವೈಜ್ಞಾನಿಕ ಆಧಾರದಲ್ಲಿ ನೀತಿಗಳನ್ನು ರೂಪಿಸಬೇಕು. ನೈಟ್ ಕರ್ಫ್ಯೂನಂತಹಾ ನಿರ್ಧಾರಗಳಿಗೆ ವೈಜ್ಞಾನಿಕ ಆಧಾರಗಳಿಲ್ಲ. ಸಾಕ್ಷ್ಯಾಧಾರಿತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

Join Whatsapp