ಡ್ರಗ್ಸ್ ಪ್ರಕರಣದಲ್ಲಿ ಯಾರ ಮೇಲೂ ಸಾಫ್ಟ್ ಕಾರ್ನರ್ ಇಲ್ಲ: ಗೃಹ ಸಚಿವ ಜ್ಞಾನೇಂದ್ರ

Prasthutha|

ಬೆಳಗಾವಿ: ಡ್ರಗ್ಸ್ ಕೇಸ್ ವಿಚಾರವಾಗಿ ಯಾರ ಮೇಲೂ ಸಾಫ್ಟ್ ಕಾರ್ನರ್ ಇಲ್ಲ. ಕಾನೂನು ಪ್ರಕಾರವೇ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಬೆಳಗಾವಿಯಲ್ಲಿ ಸ್ಪಷ್ಟಪಡಿಸಿದ್ದಾರೆ.


ಡ್ರಗ್ಸ್ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ ಕಿಶೋರ್ ಶೆಟ್ಟಿ ತಾವು ಹಾಗೂ ಆ್ಯಂಕರ್ ಅನುಶ್ರೀ ಒಟ್ಟಾಗಿಯೇ ಸಾಕಷ್ಟು ಬಾರಿ ಡ್ರಗ್ಸ್ ಸೇವನೆ ಮಾಡಿದ್ದೇವೆ ಎಂದು ಹೇಳಿಕೆ ನೀಡಿದ್ದು, ಚಾರ್ಜ್ ಶೀಟ್ ನಲ್ಲೂ ಅನುಶ್ರೀ ಅವರ ಹೆಸರು ಉಲ್ಲೇಖಿಸಲಾಗಿದೆ.
ಈ ಸಂಬಂಧ ಪ್ರತಿಕ್ರಿಯೆ ನೀಡಿದ ಸಚಿವ ಆರಗ ಜ್ಞಾನೇಂದ್ರ ಎಫ್ ಎಸ್ ಎಲ್ ವರದಿ ಬಂದಿರುವುದು ಗೊತ್ತಾಗಿದೆ. ಯಾರ ಮೇಲೂ ಸಾಫ್ಟ್ ಕಾರ್ನರ್ ಇಲ್ಲ. ಕಾನೂನು ಪ್ರಕಾರವೇ ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದರು. ಅಲ್ಲದೇ, ಪ್ರಕರಣದಲ್ಲಿ ಯಾರನ್ನೂ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು

- Advertisement -