ಕೋವಿಡ್: ಕಠಿಣ ನಿರ್ಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ ದಿನೇಶ್ ಗುಂಡೂರಾವ್

Prasthutha|

ಬೆಂಗಳೂರು: ಕೇರಳ, ತಮಿಳುನಾಡಿನಲ್ಲಿ ಕೋವಿಡ್ ಹೊಸ ಉಪತಳಿ (ಜೆನ್.1) ಪತ್ತೆಯಾಗಿರುವ ಕಾರಣಕ್ಕೆ ರಾಜ್ಯದಲ್ಲಿ ಅಂತಾರಾಜ್ಯ ಗಡಿ ಬಂದ್ ಸೇರಿ ಕಠಿಣ ನಿರ್ಬಂಧಗಳನ್ನು ಸದ್ಯಕ್ಕೆ ಜಾರಿಗೊಳಿಸುವುದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

- Advertisement -

ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚುವರು, ರಾಜ್ಯದಲ್ಲಿ ಕೋವಿಡ್ ಉಪತಳಿ ಸೋಂಕು ಪ್ರಕರಣಗಳು ವರದಿಯಾಗಿಲ್ಲ. ಕೇಂದ್ರ ಸರ್ಕಾರದ ನಿರ್ದೇಶನದಂತೆ ರಾಜ್ಯದ ಗಡಿಯಲ್ಲಿ ಕಟೆಚ್ಚರವಹಿಸಲಾಗಿದೆ. ಹೊರ ರಾಜ್ಯಗಳಿಂದ ಬಂದವರ ಪೈಕಿ ಕೋವಿಡ್ ಸೋಂಕು ಲಕ್ಷಣಗಳು ಉಳ್ಳವರಿಗೆ ಕೋವಿಡ್ ಟೆಸ್ಟ್ ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ.



Join Whatsapp