ರಾಜ್ಯದಲ್ಲಿ ಪೆಟ್ರೋಲ್ ಮೇಲಿನ ತೆರಿಗೆ ಕಡಿತ ಪ್ರಸ್ತಾಪ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Prasthutha|

ಬೆಂಗಳೂರು: ತಮಿಳುನಾಡಿನಲ್ಲಿ ಅಲ್ಲಿನ ಸರ್ಕಾರ ಪ್ರತಿ ಲೀಟರ್‌ ಪೆಟ್ರೋಲ್‌ ಮೇಲೆ 3 ರೂ  ತೆರಿಗೆ ಕಡಿತ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ರಾಜ್ಯದಲ್ಲಿ ಕಡಿತ ಮಾಡುವ ಚಿಂತನೆ ಇಲ್ಲ’ ಎಂದರು.

- Advertisement -

ಆರ್‌.ಟಿ. ನಗರದಲ್ಲಿರುವ ನಿವಾಸ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕೋವಿಡ್‌ ತಪಾಸಣೆಯ ನೆಗೆಟಿವ್ ವರದಿ ಕೊಡುತ್ತಿರುವುದು ನಮ್ಮ ಗಮನಕ್ಕೂ ಬಂದಿದೆ. ಬಸ್‌ ನಿಲ್ದಾಣ, ರೈಲು‌ ನಿಲ್ದಾಣ ಮುಂತಾದ ಕಡೆ ಕೋವಿಡ್‌ ಪರೀಕ್ಷೆಯಲ್ಲಿ ದಂಧೆ ನಡೆಯುತ್ತಿದೆ. ಈ ಸಂಬಂಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ’ಎಂದೂ ಬೊಮ್ಮಾಯಿ ಹೇಳಿದರು.

‘ಉನ್ನತ ಶಿಕ್ಷಣ, ಲೋಕೋಪಯೋಗಿ, ವಸತಿ ಈ ಮೂರು ಇಲಾಖೆಗಳ ಪ್ರಗತಿ ಪರಿಶೀಲನೆಯನ್ನು ಇಂದು ನಡೆಸುತ್ತೇನೆ’ ಎಂದು ಅವರು ತಿಳಿಸಿದರು.

Join Whatsapp