Home ಟಾಪ್ ಸುದ್ದಿಗಳು ರಾಜ್ಯದಲ್ಲಿ ಪೆಟ್ರೋಲ್ ಮೇಲಿನ ತೆರಿಗೆ ಕಡಿತ ಪ್ರಸ್ತಾಪ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಪೆಟ್ರೋಲ್ ಮೇಲಿನ ತೆರಿಗೆ ಕಡಿತ ಪ್ರಸ್ತಾಪ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ತಮಿಳುನಾಡಿನಲ್ಲಿ ಅಲ್ಲಿನ ಸರ್ಕಾರ ಪ್ರತಿ ಲೀಟರ್‌ ಪೆಟ್ರೋಲ್‌ ಮೇಲೆ 3 ರೂ  ತೆರಿಗೆ ಕಡಿತ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ರಾಜ್ಯದಲ್ಲಿ ಕಡಿತ ಮಾಡುವ ಚಿಂತನೆ ಇಲ್ಲ’ ಎಂದರು.

ಆರ್‌.ಟಿ. ನಗರದಲ್ಲಿರುವ ನಿವಾಸ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕೋವಿಡ್‌ ತಪಾಸಣೆಯ ನೆಗೆಟಿವ್ ವರದಿ ಕೊಡುತ್ತಿರುವುದು ನಮ್ಮ ಗಮನಕ್ಕೂ ಬಂದಿದೆ. ಬಸ್‌ ನಿಲ್ದಾಣ, ರೈಲು‌ ನಿಲ್ದಾಣ ಮುಂತಾದ ಕಡೆ ಕೋವಿಡ್‌ ಪರೀಕ್ಷೆಯಲ್ಲಿ ದಂಧೆ ನಡೆಯುತ್ತಿದೆ. ಈ ಸಂಬಂಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ’ಎಂದೂ ಬೊಮ್ಮಾಯಿ ಹೇಳಿದರು.

‘ಉನ್ನತ ಶಿಕ್ಷಣ, ಲೋಕೋಪಯೋಗಿ, ವಸತಿ ಈ ಮೂರು ಇಲಾಖೆಗಳ ಪ್ರಗತಿ ಪರಿಶೀಲನೆಯನ್ನು ಇಂದು ನಡೆಸುತ್ತೇನೆ’ ಎಂದು ಅವರು ತಿಳಿಸಿದರು.

Join Whatsapp
Exit mobile version