ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಗ್ರಹಕ್ಕಾಗಿ ಜಿಲ್ಲಾಡಳಿತ ಈ ಹಿಂದೇ ಹೇರಿದ್ದ ವೀಕೆಂಡ್ ಕರ್ಫ್ಯೂ ಇನ್ನು ಮುಂದೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಅವರು ಹೇಳಿದ್ದಾರೆ. ಆದರೆ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಲಾಗಿದ್ದು, ಮುಂದಿನ ದಿನಗಳಲ್ಲಿ ಯಾವುದೇ ವಾರಂತ್ಯ ಕರ್ಫ್ಯೂ ಇಲ್ಲ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ನೀಡಿದ್ದಾರೆ.
ಈ ಬಗ್ಗೆ ಜಿಲ್ಲಾಡಳಿತ ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ಯಾವುದೇ ಪ್ರತ್ಯೇಕ ಲಾಕ್ ಡೌನ್ ಇರುವುದಿಲ್ಲ. ಈಗಾಗಲೇ ಸರಕಾರ ಹೊರಡಿಸಿರುವ ಮೇ 10ರಿಂದ ಮೇ 24ರ ತನಕದ ಲಾಕ್ ಡೌನ್ ಮುಂದುವರೆಯಲಿದೆ. ಆ ಮಾರ್ಗಸೂಚಿಯೇ ಮುಂದುವರೆಯಲಿದೆ. ಅದನ್ನು ಹೊರತು ಪಡಿಸಿ ಉಳಿದಂತೆ ಯಾವುದೇ ಪ್ರತ್ಯೇಕ ವಾರಾಂತ್ಯ ಕರ್ಫ್ಯೂ ಇಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ಹಾಗೂ ರವಿವಾರದಂದು ಬೆಳಗ್ಗೆ 6ರಿಂದ 10 ಗಂಟೆಯ ತನಕ ಜಿಲ್ಲೆಯಲ್ಲಿ ಅಗತ್ಯ ವಸ್ತುಗಳು ಲಭ್ಯವಿದೆ.