ಬಾಂಗ್ಲಾ ಬಿಕ್ಕಟ್ಟು: ನೊಬೆಲ್ ಪ್ರಶಸ್ತಿ ಪುರಸ್ಕೃತ ಮುಹಮ್ಮದ್ ಯೂನಸ್ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ

Prasthutha|

ಢಾಕಾ: ನೊಬೆಲ್ ಪ್ರಶಸ್ತಿ ಪುರಸ್ಕೃತ ಡಾ.ಮುಹಮ್ಮದ್ ಯೂನಸ್ ಅವರು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರಾಗಿದ್ದಾರೆ ಎಂದು ತಾರತಮ್ಯ ವಿರೋಧಿ ವಿದ್ಯಾರ್ಥಿ ಚಳವಳಿಯ ಸಂಯೋಜಕರು ತಿಳಿಸಿದ್ದಾರೆ.

- Advertisement -


ಈ ಸಂಬಂಧ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ಪೋಸ್ಟ್ ಮಾಡಿದ್ದಾರೆ.


ದೇಶವನ್ನು ಉಳಿಸಲು ವಿದ್ಯಾರ್ಥಿ ಸಮುದಾಯದ ಒತ್ತಾಯದ ಮೇರೆಗೆ ಪ್ರೊ ಯೂನಸ್ ಈ ನಿರ್ಣಾಯಕ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಒಪ್ಪಿಕೊಂಡಿದ್ದಾರೆ ಎಂದು ಆಂದೋಲನದ ಪ್ರಮುಖ ಸಂಯೋಜಕರಲ್ಲಿ ಒಬ್ಬರಾದ ನಹಿದ್ ಇಸ್ಲಾಂ ಹೇಳಿದ್ದಾರೆ ಎಂದು ಡೈಲಿ ಸ್ಟಾರ್ ಪತ್ರಿಕೆ ವರದಿ ಮಾಡಿದೆ.

- Advertisement -


“ನಾವು ಮಧ್ಯಂತರ ಸರ್ಕಾರವನ್ನು ರಚಿಸಲು ನಿರ್ಧರಿಸಿದ್ದೇವೆ, ಇದರಲ್ಲಿ ಎಲ್ಲರಿಗೂ ಇಷ್ಟವಾಗುವ ಎಲ್ಲರೂ ಇಷ್ಟಪಡುವ ಹೆಸರಾಂತ ನೊಬೆಲ್ ಪ್ರಶಸ್ತಿ ಪುರಸ್ಕೃತ ಡಾ ಮೊಹಮ್ಮದ್ ಯೂನಸ್ ಮುಖ್ಯ ಸಲಹೆಗಾರರಾಗಿದ್ದಾರೆ” ಎಂದು ನಹಿದ್ ಹೇಳಿದರು.



Join Whatsapp