Home ಟಾಪ್ ಸುದ್ದಿಗಳು ಬಾಂಗ್ಲಾ ಬಿಕ್ಕಟ್ಟು: ನೊಬೆಲ್ ಪ್ರಶಸ್ತಿ ಪುರಸ್ಕೃತ ಮುಹಮ್ಮದ್ ಯೂನಸ್ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ

ಬಾಂಗ್ಲಾ ಬಿಕ್ಕಟ್ಟು: ನೊಬೆಲ್ ಪ್ರಶಸ್ತಿ ಪುರಸ್ಕೃತ ಮುಹಮ್ಮದ್ ಯೂನಸ್ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ

ಢಾಕಾ: ನೊಬೆಲ್ ಪ್ರಶಸ್ತಿ ಪುರಸ್ಕೃತ ಡಾ.ಮುಹಮ್ಮದ್ ಯೂನಸ್ ಅವರು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರಾಗಿದ್ದಾರೆ ಎಂದು ತಾರತಮ್ಯ ವಿರೋಧಿ ವಿದ್ಯಾರ್ಥಿ ಚಳವಳಿಯ ಸಂಯೋಜಕರು ತಿಳಿಸಿದ್ದಾರೆ.


ಈ ಸಂಬಂಧ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ಪೋಸ್ಟ್ ಮಾಡಿದ್ದಾರೆ.


ದೇಶವನ್ನು ಉಳಿಸಲು ವಿದ್ಯಾರ್ಥಿ ಸಮುದಾಯದ ಒತ್ತಾಯದ ಮೇರೆಗೆ ಪ್ರೊ ಯೂನಸ್ ಈ ನಿರ್ಣಾಯಕ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಒಪ್ಪಿಕೊಂಡಿದ್ದಾರೆ ಎಂದು ಆಂದೋಲನದ ಪ್ರಮುಖ ಸಂಯೋಜಕರಲ್ಲಿ ಒಬ್ಬರಾದ ನಹಿದ್ ಇಸ್ಲಾಂ ಹೇಳಿದ್ದಾರೆ ಎಂದು ಡೈಲಿ ಸ್ಟಾರ್ ಪತ್ರಿಕೆ ವರದಿ ಮಾಡಿದೆ.


“ನಾವು ಮಧ್ಯಂತರ ಸರ್ಕಾರವನ್ನು ರಚಿಸಲು ನಿರ್ಧರಿಸಿದ್ದೇವೆ, ಇದರಲ್ಲಿ ಎಲ್ಲರಿಗೂ ಇಷ್ಟವಾಗುವ ಎಲ್ಲರೂ ಇಷ್ಟಪಡುವ ಹೆಸರಾಂತ ನೊಬೆಲ್ ಪ್ರಶಸ್ತಿ ಪುರಸ್ಕೃತ ಡಾ ಮೊಹಮ್ಮದ್ ಯೂನಸ್ ಮುಖ್ಯ ಸಲಹೆಗಾರರಾಗಿದ್ದಾರೆ” ಎಂದು ನಹಿದ್ ಹೇಳಿದರು.

Join Whatsapp
Exit mobile version