ನೋಯ್ಡಾ: ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಅತ್ಯಾಚಾರ ಆರೋಪಿ

Prasthutha|

ಅತ್ಯಾಚಾರ ಆರೋಪಿಯೊಬ್ಬ ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.

- Advertisement -


ಅತ್ಯಾಚಾರ ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೌತಮ್ ಬುದ್ಧ ನಗರ ಜಿಲ್ಲೆಯ ಬಿಸ್ರಖ್ ಪೊಲೀಸ್ ಠಾಣೆ ವ್ಯಾಪ್ತಿಯ ಚಿಪಿಯಾನಾ ಬುಜುರ್ಗ್ ಪೋಸ್ಟ್ ನಲ್ಲಿ ಈ ಘಟನೆ ವರದಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಪೊಲೀಸ್ ಠಾಣೆಯ ಪ್ರಭಾರಿ ಮತ್ತು ಸಹಾಯಕ ಪೊಲೀಸ್ ಆಯುಕ್ತರ ವಿರುದ್ಧವೂ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದರು. ಚಿಪಿಯಾನ ಗ್ರಾಮದ ಬಳಿಯಿರುವ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಈ ವ್ಯಕ್ತಿ ಮೇಲೆ ಅತ್ಯಾಚಾರ ಆರೋಪ ಮಾಡಿದ್ದಾರೆ ಎಂದು ಡಿಸಿಪಿ ತಿಳಿಸಿದ್ದಾರೆ.



Join Whatsapp