ಸಾಹಿತಿ ಪ್ರೊ. ಭಗವಾನ್ ವಿರುದ್ಧ ಜಾಮೀನು ರಹಿತ ವಾರಂಟ್  ಜಾರಿ

Prasthutha|

ಸಾಗರ: ಧಾರ್ಮಿಕ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಕೃತಿ ರಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಹಿತಿ ಕೆ.ಎಸ್. ಭಗವಾನ್ ವಿರುದ್ಧ ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯವು ಬುಧವಾರ ಜಾಮೀನು ರಹಿತ ವಾರಂಟ್  ಹೊರಡಿಸಿದೆ.

- Advertisement -

ಭಗವಾನ್ ಅವರು ತಮ್ಮ ‘ರಾಮ ಮಂದಿರ ಏಕೆ ಬೇಡ’ ಕೃತಿಯಲ್ಲಿ ಹಿಂದೂ ಧರ್ಮೀಯರ ಭಾವನೆಗೆ ಧಕ್ಕೆ ತರುವ ಸಂಗತಿಗಳನ್ನು ನಿರೂಪಿಸಿದ್ದಾರೆ ಎಂದು ಆರೋಪಿಸಿ ಮಹಾಬಲೇಶ್ವರ ಎಂಬುವವರು ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ಈ ದೂರಿನ ವಿಚಾರಣೆ ನಡೆಸಿರುವ ನ್ಯಾಯಾಲಯ ಭಗವಾನ್ ವಿರುದ್ಧ ಐಪಿಸಿ ಸೆಕ್ಷನ್ 295(ಎ) ಅಡಿಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಸಂಬಂಧ ಕ್ರಿಮಿನಲ್ ಪ್ರಕರಣ ದಾಖಲು ಮಾಡಿಕೊಂಡಿತ್ತು. ಗುರುವಾರ ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಮೈಸೂರು ಎಸ್ಪಿ ಮೂಲಕ ಸಮನ್ಸ್ ಜಾರಿ ಮಾಡಿದ್ದರೂ ಅವರು ಹಾಜರಾಗಿಲ್ಲದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಶ್ರೀಶೈಲ ಭೀಮಸೇನ್ ಭಗಾಡೆ ಜಾಮೀನುರಹಿತ ವಾರೆಂಟ್ ಗೆ ಆದೇಶಿಸಿದ್ದಾರೆ.

Join Whatsapp