Home ಟಾಪ್ ಸುದ್ದಿಗಳು 2024ರ ಲೋಕಸಭೆ ಚುನಾವಣೆ ನಂತರ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ ಎಂದ ಉಮೇಶ್ ಕತ್ತಿ

2024ರ ಲೋಕಸಭೆ ಚುನಾವಣೆ ನಂತರ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ ಎಂದ ಉಮೇಶ್ ಕತ್ತಿ

ಬೆಳಗಾವಿ: ಪ್ರತ್ಯೇಕ ರಾಜ್ಯದ ಸೃಷ್ಟಿಯ ಬಗ್ಗೆ ಹೇಳಿಕೆ ನೀಡಿ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದ ರಾಜ್ಯ ಬಿಜೆಪಿ ಸರ್ಕಾರದ ಆಹಾರ ಖಾತೆ ಸಚಿವ ಉಮೇಶ್ ಕತ್ತಿ, ಮತ್ತೊಮ್ಮೆ ಕರ್ನಾಟಕ ಇಬ್ಭಾಗದ ಹೇಳಿಕೆ ನೀಡಿ ರಾಜ್ಯದ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
2024ರ ಲೋಕಸಭೆ ಚುನಾವಣೆ ನಂತರ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ ಎಂದು ಬೆಳಗಾವಿಯಲ್ಲಿ ಉಮೇಶ್ ಕತ್ತಿ ಹೇಳಿದ್ದಾರೆ.
2024ರ ನಂತರ ದೇಶದಲ್ಲಿ 50 ಹೊಸ ರಾಜ್ಯಗಳು ಉದಯಿಸಲಿವೆ. ಆಗ ಕರ್ನಾಟಕವೂ ಎರಡು ರಾಜ್ಯಗಳಾಗಲಿವೆ. ಇದೇ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗಿದೆ. ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ. ಈ ಅಂಶಗಳೆಲ್ಲವೂ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲು ಕಾರಣವಾಗಲಿದೆ ಎಂದು ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

Join Whatsapp
Exit mobile version