ಕೋವಿಡ್ ನಿಂದ 5 ಲಕ್ಷ ಅಲ್ಲ 40 ಲಕ್ಷ ಜನರು ಸಾವಿಗೀಡಾಗಿದ್ದಾರೆ: ರಾಹುಲ್ ಗಾಂಧಿ

Prasthutha|

ದೆಹಲಿ: ಸರ್ಕಾರದ ನಿರ್ಲಕ್ಷ್ಯದಿಂದ 40 ಲಕ್ಷ ಜನರು ಕೋವಿಡ್ ನಿಂದ ಸಾವಿಗೀಡಾಗಿದ್ದಾರೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

- Advertisement -

ಜಾಗತಿಕ ಮಟ್ಟದಲ್ಲಿ ಕೋವಿಡ್ ನಿಂದ ಸಂಭವಿಸಿದ ಸಾವಿನ ಸಂಖ್ಯೆಯನ್ನು ಬಹಿರಂಗಪಡಿಸುವ ವಿಶ್ವ ಆರೋಗ್ಯ ಸಂಸ್ಥೆಯ ಪ್ರಯತ್ನಕ್ಕೆ ಭಾರತ ತಡೆಯೊಡ್ಡುತ್ತಿದೆ ಎಂಬ ‘ನ್ಯೂಯಾರ್ಕ್ ಟೈಮ್ಸ್’ ವರದಿಯನ್ನು ಉಲ್ಲೇಖಿಸಿ ರಾಹುಲ್ ಗಾಂಧಿ  ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಅಂದಾಜಿನ ಪ್ರಕಾರ ಕೊರೋನಾ ವೈರಸ್ ಕಾಯಿಲೆ ಪ್ರಕರಣಗಳಿಗೆ ಸಂಬಂಧಿಸಿದ ಭಾರತದ ಸಾವಿನ ಸಂಖ್ಯೆ ಅಧಿಕೃತ ಸಂಖ್ಯೆಗಳಿಗಿಂತ ಸುಮಾರು ಎಂಟು ಪಟ್ಟು ಹೆಚ್ಚು ಎಂದು ವರದಿ ಹೇಳಿದೆ.  ಮೋದಿ ಜೀ ಸತ್ಯ ಹೇಳುವುದಿಲ್ಲ. ಇತರರಿಗೆ ಸತ್ಯವನ್ನು ಹೇಳಲೂ ಬಿಡುವುದಿಲ್ಲ. ಆಮ್ಲಜನಕ ಕೊರತೆಯಿಂದ ಯಾರೂ ಮೃತಪಟ್ಟಿಲ್ಲ ಎಂದು ಇನ್ನೂ ಅವರು ಸುಳ್ಳು ಹೇಳುತ್ತಿದ್ದಾರೆ. ಕೋವಿಡ್ ಕಾಲದಲ್ಲಿ ಸರ್ಕಾರ ನಿರ್ಲಕ್ಷ್ಯದಿಂದ 5 ಲಕ್ಷ ಅಲ್ಲ 40 ಲಕ್ಷ ಜನರು ಸಾವಿಗೀಡಾಗಿದ್ದಾರೆ ಎಂದು ನಾನು ಈ ಹಿಂದೆಯೂ ಹೇಳಿದ್ದೆ. ಮೋದಿ ಜೀ ಕರ್ತವ್ಯ ನಿಭಾಯಿಸಿ, ಸಂತ್ರಸ್ತ ಕುಟುಂಬಗಳಿಗೆ 4 ಲಕ್ಷ ಪರಿಹಾರ ಧನ ನೀಡಿ ಎಂದು ರಾಹುಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.



Join Whatsapp