ಶಿವಮೊಗ್ಗ: ಉಚ್ಚಾಟನೆಗೆ ಹೆದರುವುದಿಲ್ಲ. ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಿ ಗೆಲುವು ಸಾಧಿಸಿ ಬಿಜೆಪಿಗೆ ರಳಿ ಹೋಗುತ್ತೇನೆಂದು ಕೆ.ಎಸ್.ಈಶ್ವರಪ್ಪ ಹೇಳಿದರು.
ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವಿರುದ್ಧ ಬಂಡಾಯವೆದ್ದು, ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗದಿಂದ ಸ್ಪರ್ಧೆ ಮಾಡುತ್ತಿರುವ ಕೆಎಸ್ ಈಶ್ವರಪ್ಪಗೆ ಬಿಜೆಪಿ ಶಾಕ್ ನೀಡಿದ್ದು, 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆಗೊಳಿಸಿದೆ.
ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಈಶ್ವರಪ್ಪ ಅವರು, ಉಚ್ಚಾಟನೆ ಬಗ್ಗೆ ನನಗೆ ಯಾವುದೇ ಪತ್ರ ಬಂದಿಲ್ಲ. ನಾನು ಯಾವ ಉಚ್ಛಾಟನೆಗೆ ಹೆದರುವುದಿಲ್ಲ. ಈ ಬಾರಿ ಲೋಕಸಭೆ ಚುನಾವಣೆ ಸ್ಪರ್ಧೆ ಮಾಡಿ ಗೆಲ್ಲುತ್ತೇನೆ, ಮತ್ತೆ ವಾಪಸ್ ಬಿಜೆಪಿಗೆ ಹೋಗುತ್ತೇನೆ ಎಂದು ಹೇಳಿದರು.