Home Uncategorized ಚುನಾವಣೆಯಲ್ಲಿ ಸ್ಪರ್ಧಿಸಲ್ಲ : ನಿವೃತ್ತಿ ಘೋಷಿಸಿದ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ

ಚುನಾವಣೆಯಲ್ಲಿ ಸ್ಪರ್ಧಿಸಲ್ಲ : ನಿವೃತ್ತಿ ಘೋಷಿಸಿದ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ

ಕುಂದಾಪುರ: ಕುಂದಾಪುರ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ಈ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಪತ್ರಿಕೆ ಹೇಳಿಕೆ ನೀಡಿರುವ ಅವರು, ನಾನು ಸ್ವಇಚ್ಚೆ ಯಿಂದ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ ಎಂದು ಉಲ್ಲೇಖಿಸಿದ್ದಾರೆ.

ನಾನು ಶಾಸಕನಾಗಿ ಕರ್ತವ್ಯ ನಿರ್ವಹಿಸಿದ ಅವಧಿಯಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡಿ ಅತ್ಯಂತ ನಿಷ್ಠೆಯಿಂದ ನನ್ನ ಜವಾಬ್ದಾರಿ ನಿರ್ವಹಿಸಿದ್ದೇನೆ. ನನ್ನನ್ನು ಬಹು ನಿರೀಕ್ಷೆಯೊಂದಿಗೆ ಆಯ್ಕೆ ಮಾಡಿದ ಕುಂದಾಪುರದ ಎಲ್ಲಾ ವರ್ಗದ ಜನತೆಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ಬರೆದಿದ್ದಾರೆ.

Join Whatsapp
Exit mobile version