ಮನೆ ಮನೆಗೆ ತೆರಳಿ ಲಸಿಕೆ ಹಾಕುವಂತೆ ಆದೇಶ ನೀಡಲು ಸಾಧ್ಯವಿಲ್ಲ : ಸುಪ್ರೀಮ್ ಕೋರ್ಟ್

Prasthutha|

ನವದೆಹಲಿ: ವೈವಿಧ್ಯತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತದಲ್ಲಿ ಮನೆ ಮನೆಗೆ ತೆರಳಿ ಲಸಿಕೆ ಹಾಕುವಂತೆ ಸಾಮಾನ್ಯ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲವೆಂದು ಸುಪ್ರೀಮ್ ಕೋರ್ಟ್ ಬುಧವಾರ ಹೇಳಿದೆ. ಈ ಸಂಬಂಧ ಆಯಾ ರಾಜ್ಯಗಳು ಕೋವಿಡ್ 19 ಲಸಿಕೆಯನ್ನು ಜಾರಿಗೊಳಿಸುವ ಕುರಿತು ತೀರ್ಮಾನಿಸಲಿ ಎಂದು ಸುಪ್ರೀಮ್ ಕೋರ್ಟ್ ಅಭಿಪ್ರಾಯಪಟ್ಟಿದೆ.

ಭಾರತದ ಯುವ ವಕೀಲರ ಸಂಘ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿ.ಐ.ಎಲ್) ಯ ವಿಚಾರಣೆಯನ್ನು ಕೈಗೆತ್ತಿಕೊಂಡ ಸುಪ್ರೀಮ್ ಕೋರ್ಟ್ ಈ ಅದೇಶ ನೀಡಿದೆ. ಭಾರತದ ಎಲ್ಲಾ ನಾಗರಿಕರಿಗೆ ವಿಶೇಷವಾಗಿ ವಯೋವೃದ್ದ, ಅಂಗವಿಕಲ, ಸಮಾಜದ ದುರ್ಬಲ ಮತ್ತು ನಿರ್ಗತಿಕ ವರ್ಗದ ಜನರಿಗೆ ಕೋವಿಡ್ ಲಸಿಕೆಯನ್ನು ಸಾರ್ವತ್ರಿಕವಾಗಿ ನೀಡುವಂತೆ ಅರ್ಜಿಯಲ್ಲಿ ಕೋರಲಾಗಿತ್ತು.

- Advertisement -

ಲಸಿಕೆಗೆ ಸಂಬಂಧಿಸಿದಂತೆ ಅರ್ಜಿದಾರರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವನ್ನು ಸಂಪರ್ಕಿಸುವಂತೆ ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್, ವಿಕ್ರಮ್ ನಾಥ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠ ಈ ಆದೇಶವನ್ನು ನೀಡಿದೆ. ಜುಲೈನಲ್ಲಿ ಬಾಂಬೆ ಹೈಕೋರ್ಟ್ ಮಹಾರಾಷ್ಟ್ರ ಸರ್ಕಾರಕ್ಕೆ ವಯಸ್ಸಾದವರಿಗೆ ಮತ್ತು ಹಾಸಿಗೆ ಹಿಡಿದಿರುವ ಅಥವಾ ಗಾಲಿಕುರ್ಚಿಯಲ್ಲಿರುವವರಿಗೆ ಮನೆಮನೆಗೆ ತೆರಳಿ ಲಸಿಕೆ ಹಾಕುವಂತೆ ಸೂಚಿಸಿತ್ತು.

- Advertisement -