ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸಿಲ್ಲ, ಒತ್ತಾಯಪೂರ್ವಕವಾಗಿ ಯಾರಿಗೂ ಲಸಿಕೆ ನೀಡುವುದಿಲ್ಲ: ಕೇಂದ್ರ ಸ್ಪಷ್ಟನೆ

Prasthutha|

ನವದೆಹಲಿ: ಕೋವಿಡ್ ಲಸಿಕೆ ಬಗ್ಗೆ ಇದ್ದ ಗೊಂದಲವನ್ನು ಕೇಂದ್ರ ಸರ್ಕಾರ ನಿವಾರಿಸಿದ್ದು, ಲಸಿಕೆ ಪಡೆಯುವುದು ಕಡ್ಡಾಯವಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

- Advertisement -

ದೇಶದಲ್ಲಿ ಒತ್ತಾಯಪೂರ್ವಕವಾಗಿ ಯಾರಿಗೂ ಲಸಿಕೆ ನೀಡುವುದಿಲ್ಲ. ಅಂತಹ ಯಾವುದೇ ಸೂಚನೆಯನ್ನು ಕೇಂದ್ರ ಸರ್ಕಾರ ಅಥವಾ ಆರೋಗ್ಯ ಸಚಿವಾಲಯ ಹೊರಡಿಸಿಲ್ಲ ಎಂದು ಸುಪ್ರೀಂಕೋರ್ಟ್ ಗೆ ಕೇಂದ್ರ ಸರ್ಕಾರ ಅಫಿದವರಿತ್ ಮೂಲಕ ತಿಳಿಸಿದೆ.

ಲಸಿಕೆ ಪಡೆಯುವುದನ್ನು ಕಡ್ಡಾಯ ಮಾಡಲಾಗುತ್ತಿದೆ ಮತ್ತು ಮನೆ ಮನೆ ತೆರಳಿ ಲಸಿಕೆ ನೀಡಲಾಗುತ್ತಿದೆ ಎಂದು ಆರೋಪಿಸಿ ಇವಾರ ಫೌಂಡೇಶನ್ ಎಂಬ ಎನ್ ಜಿಒ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ವೇಳೆ ಕೇಂದ್ರ ಸರ್ಕಾರ ನ್ಯಾಯಪೀಠಕ್ಕೆ ಈ ಉತ್ತರ ನೀಡಿದೆ.

- Advertisement -

ಜನರ ಹಿತಾಸಕ್ತಿಯಿಂದ ಮತ್ತು ಕೋವಿಡ್ ಸೋಂಕು ಎಲ್ಲೆಡೆ ಹರಡುವುದನ್ನು ತಪ್ಪಿಸಲು ಲಸಿಕೆ ಪಡೆಯುವುದು ಮತ್ತು ಲಸಿಕೆ ಪ್ರಮಾಣಪತ್ರ ಹೊಂದಿರುವುದನ್ನು ಆರೋಗ್ಯ ಸಚಿವಾಲಯ ಅಭಿಯಾನ ಕೈಗೊಂಡಿದೆ. ಆದರೆ ಒತ್ತಾಯದಿಂದ ಯಾರ ಮೇಲೂ ಅದನ್ನು ಹೇರಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ಅಫಿದವಿತ್ ಸಲ್ಲಿಸಿದೆ.

ಎಲ್ಲರೂ ಲಸಿಕೆ ಪಡೆದು ಕೋವಿಡ್ ಸೋಂಕಿನ ವಿರುದ್ಧ ಹೋರಾಡುವಂತೆ ಸೂಚಿಸಲಾಗಿದೆ. ಆದರೆ ಯಾರಿಗೂ ಅವರ ಇಚ್ಛೆಗೆ ವಿರುದ್ಧವಾಗಿ ಲಸಿಕೆ ನೀಡಿಲ್ಲ ಎಂದು ಕೇಂದ್ರ ಸ್ಪಷ್ಟಪಡಿಸಿದೆ.

Join Whatsapp