ಉಡುಪಿ: ಎನ್ ಡಿಎ ವರ್ಸಸ್ ಇಂಡಿಯಾ ಅಲ್ಲ, ಇದು ಭಾರತ ವರ್ಸಸ್ ಇಂಡಿಯಾ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿಪಕ್ಷಗಳ ಮೈತ್ರಿಕೂಟದ ಕುರಿತು ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು , ವಿಪಕ್ಷಗಳು ತಮ್ಮ ಒಕ್ಕೂಟಕ್ಕೆ ಸಂವಿಧಾನ ವಿರೋಧಿ ಹೆಸರು ಇಟ್ಟುಕೊಂಡಿದ್ದಾರೆ. ಲಾಂಛನಗಳು ಮತ್ತು ಹೆಸರುಗಳು (ಅಸಮರ್ಪಕ ಬಳಕೆಯ ತಡೆಗಟ್ಟುವಿಕೆ) ಕಾಯಿದೆ ಪ್ರಕಾರ ಈ ರೀತಿ ಇಂಡಿಯಾ ಎನ್ನುವ ಹೆಸರನ್ನು ಯಾವುದೇ ಪಾರ್ಟಿ ಸಂಘಟನೆ ಸಂಸ್ಥೆಗೆ ಇಡುವಂತಿಲ್ಲ ಎಂದು ಹೇಳಿದರು.
60 ವರ್ಷ ದೇಶ ಆಳಿದವರು ಬೇರೆ ಯಾವುದೇ ಹೆಸರಿಟ್ಟರೆ ಜನ ಬೆಲೆ ಕೊಡುವುದಿಲ್ಲ. ಈ ಕಾರಣಕ್ಕೆ ಇಂಡಿಯಾ ಎಂಬ ಹೆಸರಿಟ್ಟಿದ್ದಾರೆ. ಇದು ಎನ್ ಡಿ ಎ ವರ್ಸಸ್ ಇಂಡಿಯಾ ಅಲ್ಲ, ಇದು ಭಾರತ ವರ್ಸಸ್ ಇಂಡಿಯಾ. ಭಾರತದಲ್ಲಿ ಈಗ ಹೊಸ ಕಂಪನಿ ಆರಂಭವಾಗಿದೆ ಎಂದರು.