Home ಕರಾವಳಿ IAS, IPS ಮಾತ್ರವಲ್ಲ, ಪಿಡಿಒಯಿಂದ ರಾಷ್ಟ್ರಪತಿವರೆಗೂ RSSನವರಿದ್ದಾರೆ: ಸುನಿಲ್ ಕುಮಾರ್

IAS, IPS ಮಾತ್ರವಲ್ಲ, ಪಿಡಿಒಯಿಂದ ರಾಷ್ಟ್ರಪತಿವರೆಗೂ RSSನವರಿದ್ದಾರೆ: ಸುನಿಲ್ ಕುಮಾರ್

ಉಡುಪಿ: ಐಎಎಸ್, ಐಪಿಎಸ್ ಅಧಿಕಾರಿಗಳು ಮಾತ್ರವಲ್ಲ, ಪಿಡಿಒಗಳಿಂದ ಹಿಡಿದು ರಾಷ್ಟ್ರಪತಿಯವರೆಗೂ ಆರ್‌ ಎಸ್‌ ಎಸ್‌ ನವರು ಇದ್ದಾರೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದ್ದಾರೆ.


ಬುಧವಾರ ಮಣಿಪಾಲದ ಸಿದ್ಧಿ ವಿನಾಯಕ ದೇವಾಸ್ಥಾನದ ಬಳಿ ಸ್ವರ್ಣಾ ನದಿಗೆ ಬಾಗಿನ ಅರ್ಪಿಸಿ ಮಾತನಾಡಿದ ಸಚಿವರು, ಆರ್‌ ಎಸ್ ಎಸ್ ಹಿನ್ನೆಲೆಯ ನಾಲ್ಕು ಸಾವಿರ ಐಎಎಸ್, ಐಪಿಎಸ್ ಅಧಿಕಾರಿಗಳು ಇದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ನಿನ್ನೆ ಹೇಳಿರುವುದಕ್ಕೆ ತಿರುಗೇಟು ನೀಡಿದ ಸಚಿವರು, ಎಚ್ ಡಿಕೆಗೆ ಮಾಹಿತಿ ಕೊರತೆ ಇದ್ದು, ನಾಲ್ಕು ಸಾವಿರಕ್ಕೂ ಹೆಚ್ಚು ಅಧಿಕಾರಿಗಳಿದ್ದಾರೆ. ಅವರೆಲ್ಲರೂ ರಾಷ್ಟ್ರ ಕಟ್ಟುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಹೇಳಿದ್ದಾರೆ

ಅಪ್ಪ ಮಗ ಗೌಡರು ಆರೆಸ್ಸೆಸ್ ಬಗೆಗೆ ಒಂದೊಂದು ಸಲ ಒಂದೊಂದು ರೀತಿ ಮಾತನಾಡಿದ್ದಾರೆ. ಆರೆಸ್ಸೆಸ್ ಜನ ಎಲ್ಲ ಹಂತದಲ್ಲಿ ಇದ್ದು ದೇಶ ಕಟ್ಟುವ ಕೆಲಸ ಮಾಡುತ್ತಾರೆ ಎಂದು ಅವರು ಹೇಳಿದರು.

ಈಗಿರುವ ಐದು ರಂಗಾಯಣ ಮಾದರಿಯಲ್ಲಿ ಕಾರ್ಕಳದ ಕೋಟಿ ಚೆನ್ನಯ ಥೀಮ್ ಪಾರ್ಕ್ ಬಳಿ ಇನ್ನೊಂದು ರಂಗಾಯಣ ಹುಟ್ಟು ಹಾಕಲಾಗುತ್ತದೆ ಎಂದೂ ಸಚಿವರು ತಿಳಿಸಿದರು.

Join Whatsapp
Exit mobile version