ಮತ್ತೆ ಲಾಕ್’ಡೌನ್ ಮಾಡುವ ಸೂಚನೆ: ಅಂತಿಮ ನಿರ್ಧಾರ ಸಿಎಂ ಕೈಯಲ್ಲಿ

Prasthutha|

- Advertisement -

ಮುಂಬೈ : ದೇಶದ ಒಂದೊಂದೇ ರಾಜ್ಯದಲ್ಲಿ ಮತ್ತೆ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಇದರ ಜೊತೆಗೆ ಓಮಿಕ್ರಾನ್ ರೂಪಾಂತರಿ ವೈರಸ್ ಭೀತಿಯೂ ಕಾಡುತ್ತಿದೆ. ಸದ್ಯ ಮಹಾರಾಷ್ಟ್ರ, ಕೇರಳ ಮತ್ತು ದೆಹಲಿಗಳಲ್ಲಿ ಕೊರೊನಾ ಸೋಂಕು ಪ್ರಮಾಣದಲ್ಲಿ ಗಣನೀಯ ಏರಿಕೆಯಾಗುತ್ತಿದ್ದು, ಮತ್ತೆ ಮೊದಲಿನಂತೆ ನಿರ್ಬಂಧ ವಿಧಿಸಲಾಗುತ್ತಿದೆ. ಈ ನಡುವೆ ಮಹಾರಾಷ್ಟ್ರ ಸಚಿವರೊಬ್ಬರು ಮತ್ತೊಮ್ಮೆ ಲಾಕ್ಡೌನ್ ಮಾಡುವ ಸೂಚನೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಮಹಾರಾಷ್ಟ್ರ ಸಚಿವ ವಿಜಯ್ ವಡೆತ್ತಿವಾರ್, ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಮಿತಿಮೀರುತ್ತಿದೆ. ಮತ್ತೆ ಲಾಕ್‌ಡೌನ್ ಹೇರುವ ಕಾಲ ಸಮೀಪಿಸುತ್ತಿದೆ. ಆದರೆ ಈ ಬಗ್ಗೆ ಅಂತಿಮವಾಗಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರೇ ನಿರ್ಣಯ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

- Advertisement -

ಮಹಾರಾಷ್ಟ್ರದಲ್ಲಿ ಕಳೆದ 11 ದಿನಗಳಿಂದಲೂ ಕೊವಿಡ್- 19 ಸೋಂಕಿತರ ಸಂಖ್ಯೆ ಏರುತ್ತಿದೆ. ದಿನದಲ್ಲಿ ದಾಖಲಾಗುವ ಪ್ರಕರಣಗಳು ಹೆಚ್ಚುತ್ತಿವೆ. ಕೆಲವೇ ದಿನಗಳ ಹಿಂದೆ ಸರ್ಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಮುಂಬೈನಲ್ಲಿ ಜನವರಿ 7ರವರೆಗೂ ಸೆಕ್ಷನ್ 144 ಜಾರಿಯಲ್ಲಿದೆ. ಇನ್ನು ಮಹಾರಾಷ್ಟ್ರದಾದ್ಯಂತ ಯಾವುದೇ ಸಾಮಾಜಿಕ, ರಾಜಕೀಯ, ಧಾರ್ಮಿಕ ಸಮಾರಂಭ ನಡೆಸಿದರೂ 50 ಜನ ಮಾತ್ರ ಸೇರಬಹುದು. ಅಂತ್ಯಸಂಸ್ಕಾರದಲ್ಲಿ ಗರಿಷ್ಠ 20 ಜನ ಪಾಲ್ಗೊಳ್ಳಬಹುದು ಎಂದು ನಿರ್ಬಂಧ ವಿಧಿಸಲಾಗಿದೆ.



Join Whatsapp