ಕನ್ನಡದ ಖ್ಯಾತ ಸಾಹಿತಿ, ವಿಮರ್ಶಕ ಕೆ.ವಿ ತಿರುಮಲೇಶ್ ನಿಧನ

Prasthutha|

ಬೆಂಗಳೂರು: ಕನ್ನಡದ ಖ್ಯಾತ ಸಾಹಿತಿ, ಕವಿ ವಿಮರ್ಶಕ ಕೆ.ವಿ. ತಿರುಮಲೇಶ್ (82) ನಿಧನರಾಗಿದ್ದಾರೆ.

ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ತಿರುಮಲೇಶ್ ಇಂದು ಮುಂಜಾನೆ ಹೈದರಾಬಾದಿನ ತಮ್ಮ ಮಗಳ ನಿವಾಸದಲ್ಲಿ ನಿಧನರಾದರು.
ಪತ್ನಿ, ಮೂವರು ಹೆಣ್ಣು ಮಕ್ಕಳನ್ನು ತಿರುಮಲೇಶ್ ಅಗಲಿದ್ದಾರೆ.
ತಿರುಮಲೇಶ್ ಅವರು ಕಾಸರಗೋಡು ಜಿಲ್ಲೆಯ ಕಾರಡ್ಕ ಗ್ರಾಮದಲ್ಲಿ 1940ರ ಸೆಪ್ಟೆಂಬರ್ 12ರಂದು ಜನಿಸಿದ್ದು, ಕನ್ನಡ ಭಾಷೆಯ ಬಹು ಮುಖ್ಯ ಕವಿ, ಕತೆಗಾರ, ಭಾಷಾ ವಿಜ್ಞಾನಿ, ವಿದ್ವಾಂಸ ಹಾಗೂ ವಿಮರ್ಶಕರಾಗಿ ಗುರುತಿಸಿಕೊಂಡಿದ್ದರು. 1975ರಲ್ಲಿ ಉನ್ನತ ವ್ಯಾಸಂಗಕ್ಕಾಗಿ ಹೈದರಾಬಾದಿಗೆ ತೆರಳಿದ ತಿರುಮಲೇಶರು ಅಲ್ಲಿ ಭಾಷಾ ವಿಜ್ಞಾನದಲ್ಲಿ ಪಿಎಚ್.ಡಿ ಗಳಿಸಿದರು. ಹೈದರಾಬಾದಿನ ಸೆಂಟ್ರಲ್ ಇನ್ಸಿಟ್ಯೂಟ್ ಆಫ್ ಇಂಗ್ಲೀಷ್ ಆಂಡ್ ಫಾರಿನ್ ಲಾಂಗ್ವಿಜಸ್ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿದ್ದು ನಿವೃತ್ತಿ ಹೊಂದಿದ್ದರು. ನಂತರ ಯೆಮನ್ ದೇಶದಲ್ಲಿ ಕೆಲಕಾಲ ಇಂಗ್ಲಿಷ್ ಅಧ್ಯಾಪನ ಮಾಡಿದ್ದರು.

- Advertisement -