ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಎದೆ ನೋವಿನಿಂದ ಆಸ್ಪತ್ರೆಗೆ ದಾಖಲು

Prasthutha|

ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

- Advertisement -


ಬೆಂಗಳೂರಿನ ರಾಜಾಜಿನಗರ ಫಸ್ಟ್ ಬ್ಲಾಕ್ ನಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ಹಂಸಲೇಖ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದಲ್ಲಿ ಏರುಪೇರು ಆದ ವಿಷಯ ಕೇಳಿ ಅಭಿಮಾನಿಗಳಿಗೆ ಆತಂಕ ಆಗಿದೆ. ಆದರೆ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

Join Whatsapp