ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬೆಂಗಳೂರಿನ ರಾಜಾಜಿನಗರ ಫಸ್ಟ್ ಬ್ಲಾಕ್ ನಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ಹಂಸಲೇಖ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದಲ್ಲಿ ಏರುಪೇರು ಆದ ವಿಷಯ ಕೇಳಿ ಅಭಿಮಾನಿಗಳಿಗೆ ಆತಂಕ ಆಗಿದೆ. ಆದರೆ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.