ಖ್ಯಾತ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ ಇನ್ನಿಲ್ಲ

Prasthutha: July 2, 2021

ಬೆಂಗಳೂರು: ಖ್ಯಾತ ವಿಜ್ಞಾನಿ, ಸುಪ್ರಸಿದ್ಧ ವಿಜ್ಞಾನ ಬರಹಗಾರ ಸುಧೀಂದ್ರ ಹಾಲ್ದೊಡ್ಡೇರಿ(61) ನಿಧನರಾಗಿದ್ದಾರೆ.

ಹಾಲ್ದೊಡ್ಡೇರಿಯವರಿಗೆ ಅನುಪಮಾ ನಿರಂಜನ ವೈದ್ಯಕೀಯ ವಿಜ್ಞಾನ ಪ್ರಶಸ್ತಿ ಬಂದಿದ್ದು, ಪ್ರಶಸ್ತಿ ಬಂದ ದಿನವೇ ಸುಧೀಂದ್ರ ನಿಧನ ಹೊಂದಿದ್ದಾರೆ.

ಸುಧೀಂದ್ರ ಹಾಲ್ದೊಡ್ಡೇರಿ ಅವರ ಮೆದುಳಿಗೆ ಆಮ್ಲಜನಕ ಪೂರೈಕೆಯಾಗುವುದು ಸ್ಥಗಿತಗೊಂಡಿದ್ದರಿಂದ ಅವರ ಮೆದುಳು ನಿಷ್ಕ್ರಿಯಗೊಂಡಿತ್ತು. ಈ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ದೇಹದಾನಕ್ಕೆ ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

 ಏರೋಸ್ಪೇಸ್ ಎಂಜಿನಿಯರಿಂಗ್ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿರುವ ಸುಧೀಂದ್ರ ಅವರು, ಡಿಆರ್ಡಿಒದಲ್ಲಿ ಕಾರ್ಯ ನಿರ್ವಹಿಸಿದ್ದರು. HAL ನಲ್ಲಿ ಸುಮಾರು 22 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. HAL ಎಂಜಿನ್ ವಿಭಾಗದಲ್ಲಿಯೂ ಸುಮಾರು 13 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಜಾಗ್ವಾರ್, ಕಿರಣ್ ಹಾಗೂ ಚೀತಾ ವಿಮಾನ ಹಾಗೂ ಸೀ ಕಿಂಗ್ ಹೆಲಿಕಾಪ್ಟರ್ಗಳ ಎಂಜಿನ್ ಅಭಿವೃದ್ಧಿಗೆ ಅವರ ಕೊಡುಗೆ ಮಹತ್ವದ್ದಾಗಿದೆ.

ಡಿಆರ್ಡಿಒದ ಗ್ಯಾಸ್ ಟರ್ಬೈನ್ ರಿಸರ್ಚ್ ವಿಭಾಗದಲ್ಲಿ ಕಾರ್ಯನಿರ್ವಹಿಸಿದ್ದ ಅವರು ಕಾವೇರಿ ಎಂಬ ಎಂಜಿನ್ ಅಭಿವದ್ಧಿಪಡಿಸಿದ್ದರು. ಶ್ರೀಯತರು ಕರ್ನಾಟಕ ಸರ್ಕಾರದಿಂದ ‘ಅತ್ಯುತ್ತಮ ವಿಜ್ಞಾನ ಸಂವಹನಕಾರ’ಪ್ರಶಸ್ತಿ ಸೇರಿದಂತೆ ಹಲವು ಗೌರವಗಳಿಗೆ ಭಾಜನರಾಗಿದ್ದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ