ಮಂಗಳೂರು: ಕವಿ, ಕಥೆಗಾರ ಅಮೃತ ಸೋಮೇಶ್ವರ ಅವರು ಇಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಅವರಿಗೆ 89 ವರ್ಷ ವಯಸ್ಸಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಯ ಕೋಟೆಕಾರು ಸಮೀಪದ ಅಡ್ಯ ಎಂಬಲ್ಲಿ 1935 ಸೆಪ್ಟಂಬರ್ 27 ರಂದು ಜನಿಸಿದರು. ಕನ್ನಡ ಸಂಘ, ಯಕ್ಷಗಾನ ಸಂಘ ಇಂತಹ ಕೂಟಗಳನ್ನು ಆರಂಭಿಸಿ ತುಳು ಭಾಷೆಯ ಬೆಳವಣಿಗೆಗಾಗಿ ಶ್ರಮಿಸಿದ್ದಾರೆ. ವಿದ್ಯಾರ್ಥಿಯಾಗಿದ್ದಾಗಲೇ ಸಾಹಿತ್ಯದಲ್ಲಿ ಆಸಕ್ತಿಯನ್ನು ಹೊಂದಿದ್ದ ಇವರು ತುಳುನಾಡಿನ ಸಂಸ್ಕ್ರತಿ ಮತ್ತು ಕಲೆಯ ಬಗೆಗೆ ವಿಶೇಷ ಒಲವುಳ್ಳವರು. ಅವರ ಮೊದಲ ಕೃತಿ ‘ಎಲೆಗಿಳಿ’ ಎಂಬ ಸಣ್ಣಕತೆಗಳ ಸoಕಲನ 1957ರಲ್ಲಿ ಪ್ರಕಟವಾಯಿತು.