ರೈತ ನಾಯಕರಿಗೆ ಸುಪ್ರೀಂ ಕೋರ್ಟ್ ನಿಂದ ನೋಟಿಸ್!

Prasthutha|

ಹೊಸದಿಲ್ಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕರಾಳ ಕೃಷಿ ಕಾನೂನನ್ನು ಕೈ ಬಿಡಬೇಕೆಂದು ಆಗ್ರಹಿಸಿ ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘದ ನಾಯಕರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಕಳುಹಿಸಿದೆ.

- Advertisement -

 ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿ ಗಡಿಯಲ್ಲಿ ರಸ್ತೆ ತಡೆ ನಡೆಸಿರುವುದನ್ನು ವಿರೋಧಿಸಿ ನೋಯ್ಡಾ ನಿವಾಸಿ ಸಲ್ಲಿಸಿದ ಅರ್ಜಿಯ ಹಿನ್ನೆಲೆಯಲ್ಲಿ 43 ರೈತ ಸಂಘದ ನಾಯಕರಿಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. 43 ರೈತ ಸಂಘದ ನಾಯಕರ ಮೇಲೂ ಪ್ರಕರಣ ದಾಖಲಿಸುವಂತೆ ಕೋರಿ ಹರಿಯಾಣ ಸರ್ಕಾರ ಅರ್ಜಿ ಸಲ್ಲಿಸಿತ್ತು.

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎಂಎಂ ಸುಂದರೇಶ್ ಅವರನ್ನೊಳಗೊಂಡ ಪೀಠವು ರೈತ ನಾಯಕರಿಗೆ ನೋಟಿಸ್ ಜಾರಿಗೊಳಿಸಿದೆ. ಇದೇ ತಿಂಗಳ 20ನೇ ತಾರೀಕಿನಂದು ಪ್ರಕರಣದ ವಿಚಾರಣೆ ನಡೆಯಲಿದೆ.

Join Whatsapp