ಛತರ್ಪುರ್(ಮಧ್ಯಪ್ರದೇಶ): ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ವಿಮಾನ ನಿಲ್ದಾಣದಲ್ಲಿ ತಣ್ಣಗಾದ ಟೀ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ಅಧಿಕಾರಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಮುಂದಿನ ಮೂರು ದಿನಗಳಲ್ಲಿ ನೋಟಿಸ್’ಗೆ ಉತ್ತರ ನೀಡುವಂತೆ ಸೂಚನೆ ನೀಡಲಾಗಿದೆ. ನಗರ ಸಂಸ್ಥೆಗಳ ಚುನಾವಣಾ ಪ್ರಚಾರಕ್ಕಾಗಿ ಛತ್ತರ್ಪುರ್ ಜಿಲ್ಲೆಗೆ ಮುಖ್ಯಮಂತ್ರಿ ಆಗಮಿಸಿದ್ದರು. ಈ ವೇಳೆ ವಿಮಾನ ನಿಲ್ದಾಣದಲ್ಲಿ ರುಚಿಯಿಲ್ಲದ ಮತ್ತು ತಣ್ಣನೆಯ ಟೀ ನೀಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಪಿಡಬ್ಲೂಡಿ ಇಲಾಖೆಯ ಅಧಿಕಾರಿ ರಾಕೇಶ್ ಕನೌಹಾಗೆ ನೋಟಿಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ.