Home ಟಾಪ್ ಸುದ್ದಿಗಳು ರೈತರಿಗೆ ನೋಟಿಸ್; ಜೆಪಿಸಿಗೆ ಮಾಹಿತಿ ನೀಡಿದ್ದೇವೆ: ಬೊಮ್ಮಾಯಿ

ರೈತರಿಗೆ ನೋಟಿಸ್; ಜೆಪಿಸಿಗೆ ಮಾಹಿತಿ ನೀಡಿದ್ದೇವೆ: ಬೊಮ್ಮಾಯಿ

ಹುಬ್ಬಳ್ಳಿ: ‘ರಾಜ್ಯದಲ್ಲಿ ವಕ್ಫ್ ಬೋರ್ಡ್ ನಿಂದ ರೈತರಿಗೆ ನೋಟಿಸ್ ನೀಡಿರುವುದನ್ನು ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ಗಮನಕ್ಕೆ ತಂದಿದ್ದೇನೆ’ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.


ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಹಾವೇರಿ ಜಿಲ್ಲೆಯ ಶಿಗ್ಗಾವಿ ಸವಣೂರು ಸೇರಿದಂತೆ ಎಲ್ಲ ತಾಲೂಕುಗಳಲ್ಲಿ ವಕ್ಫ್ ಬೋರ್ಡ್ ನಿಂದ ರೈತರಿಗೆ, ಆಸ್ಪತ್ರೆ, ಶಾಲೆ, ಕಾಗಿನೆಲೆ ಮಠಕ್ಕೆ ನೊಟೀಸ್ ನೀಡಲಾಗಿದೆ. ಇದನ್ನು ಜೆಪಿಸಿ ಅಧ್ಯಕ್ಷ ಗಮನಕ್ಕೆ ತಂದಿದ್ದೇನೆ. ಕೇವಲ ಹಾವೇರಿ ಜಿಲ್ಲೆಯಷ್ಟೇ ಅಲ್ಲ ಧಾರವಾಡ, ವಿಜಯಪುರ, ಕೊಪ್ಪಳ, ಗದಗ, ಹಳೆ ಮೈಸೂರಿನ ಮಂಡ್ಯ, ಮೈಸೂರು ಜಿಲ್ಲೆ ಸೇರಿದಂತೆ ಎಲ್ಲ ಜಿಲ್ಲೆಗಳಲ್ಲಿ ರೈತರಿಗೆ ನೊಟೀಸ್ ಕೊಟ್ಟಿದ್ದಾರೆ. ವಕ್ಫ್ ಕಾಯಿದೆ ದುರ್ಬಳಕೆ ಮಾಡಿಕೊಂಡಿರುವುದರಿಂದ ಸಮಸ್ಯೆ ಉಲ್ಬಣಗೊಂಡಿದೆ. ಈ ಬಗ್ಗೆ ಸಮಿತಿ ಗಮನಕ್ಕೆ ತಂದಿದ್ದೇವೆ’ ಎಂದು ಹೇಳಿದರು.


ರಾಜ್ಯದಲ್ಲಿ ತರಾತುರಿಯಲ್ಲಿ ವಕ್ಫ್ ಅದಾಲತ್ ಮಾಡಿ, ಕೇಂದ್ರದಲ್ಲಿ ವಕ್ಫ್ ಕಾಯ್ದೆ ತಿದ್ದುಪಡಿಯಾಗುವ ಮೊದಲೇ ರೈತರ ಭೂಮಿಯನ್ನು ವಕ್ಫ್ ಆಸ್ತಿಯನ್ನಾಗಿ ಮಾಡಿಕೊಳ್ಳುವ ಹುನ್ನಾರ ನಡೆಸಿದ್ದಾರೆ. ಕೇವಲ ಹಿಂದೂಗಳಲ್ಲ, ಮುಸ್ಲಿಂ ಸಮುದಾಯದ ರೈತರ ಜಮೀನಿಗೂ ನೊಟಿಸ್ ಕೊಟ್ಟಿದ್ದಾರೆ. ಇಡೀ ರೈತ ಸಮುದಾಯ ಆಕ್ರೋಶಗೊಂಡಿದೆ ಎಂದು ಹೇಳಿದರು.

Join Whatsapp
Exit mobile version