ಬೆಂಗಳೂರು: ಧ್ವನಿವರ್ಧಕಗಳ ಬಳಕೆಯಲ್ಲಿ ನ್ಯಾಯಾಲಯದ ಆದೇಶಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕರ್ನಾಟಕ ಮುಖ್ಯ ಕಾರ್ಯದರ್ಶಿಯವರು ಅರಣ್ಯ, ಪರಿಸರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದು ಸೂಚಿಸಿದ್ದಾರೆ.
ಧ್ವನಿವರ್ಧಕಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಬಳಸುವ ಎಲ್ಲಾ ಬಳಕೆದಾರರು 15 ದಿನಗಳೊಳಗೆ ಗೊತ್ತುಪಡಿಸಿದ ಪ್ರಾಧಿಕಾರದಿಂದ ಲಿಖಿತ ಅನುಮತಿಯನ್ನು ಪಡೆಯಬೇಕು. ಪಡೆಯದವರು ಸ್ವಯಂಪ್ರೇರಣೆಯಿಂದ ತೆಗೆದುಹಾಕಬೇಕು ಅಥವಾ ಗೊತ್ತುಪಡಿಸಿದ ಪ್ರಾಧಿಕಾರ ತೆಗೆದುಹಾಕಬೇಕು. ಅರ್ಜಿಯ ವಿಲೇವಾರಿಗಾಗಿ ವಿವಿಧ ಹಂತಗಳಲ್ಲಿ ಸಮಿತಿಗಳನ್ನು ರಚಿಸಲು ಸೂಚಿಸಲಾಗಿದೆ.
ಕಮಿಷನರೇಟ್ ವ್ಯಾಪ್ತಿಯಲ್ಲಿ ಪೊಲೀಸ್ ಕಮೀಷನರ್ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಉಳಿದ ಪ್ರದೇಶಗಳಲ್ಲಿ ಡಿವೈ ಎಸ್ ಪಿ , ತಹಶೀಲ್ದಾರರಿಂದ ಅನುಮತಿಯನ್ನು ಪಡೆಯಲು ಪತ್ರದಲ್ಲಿ ತಿಳಿಸಲಾಗಿದೆ.