ಬೆಂಗಳೂರು : ಪಕ್ಷದ ಶಾಸಕರು ಯಾರೇ ಆಗಲಿ ಪಕ್ಷದ ಆಂತರಿಕ ವಿಚಾರ, ಸರ್ಕಾರ ಹಾಗೂ ಅಧಿಕಾರದ ಬಗ್ಗೆ ಮಾಧ್ಯಮಗಳ ಮುಂದೆ ಅನಗತ್ಯ ಹೇಳಿಕೆ ನೀಡಬಾರದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದ ಶಾಸಕ ರವಿ ಗಣಿಗ ಅವರ ಬಿಜೆಪಿಯ ಆಮಿಷದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಈ ಷಡ್ಯಂತ್ರದ ಬಗ್ಗೆ ನಮಗೆ ಗೊತ್ತಿದೆ. ಇದರ ಹಿಂದೆ ದೊಡ್ಡ, ದೊಡ್ಡ ನಾಯಕರು ಇದ್ದಾರೆ. ಆದರೆ, ಇದರಿಂದ ಏನೂ ಆಗುವುದಿಲ್ಲ ಎಂದು ತಿಳಿಸಿದರು.
ಪಕ್ಷದ ಶಾಸಕರು ಯಾರೇ ಆಗಲಿ ಪಕ್ಷದ ಆಂತರಿಕ ವಿಚಾರ, ಸರ್ಕಾರ ಹಾಗೂ ಅಧಿಕಾರದ ಬಗ್ಗೆ ಮಾಧ್ಯಮಗಳ ಮುಂದೆ ಅನಗತ್ಯ ಹೇಳಿಕೆ ನೀಡಬಾರದು ಎಂದು ಮನವಿ ಹಾಗೂ ಎಚ್ಚರಿಕೆ ನೀಡುತ್ತೇನೆ. ಇಷ್ಟರ ನಂತರವೂ ಹೇಳಿಕೆ ನೀಡಿದರೆ ವಿಧಿ ಇಲ್ಲದೇ ಅವರಿಗೆ ನೊಟೀಸ್ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.