ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ–2023ಕ್ಕೆ ನಾಳೆ ಅಧಿಕೃತವಾಗಿ ಅಧಿಸೂಚನೆ ಹೊರಬೀಳಲಿದ್ದು, ನಾಳೆಯಿಂದಲೇ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಲಿದೆ.
ಗುರುವಾರದಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಲಿದ್ದು ಒಟ್ಟು ಏಳು ದಿನ ಕಾಲಾವಕಾಶವಿದೆ. ಏ.20 ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ.
ಏಪ್ರಿಲ್ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು ನಾಮಪತ್ರ ವಾಪಸ್ ಪಡೆಯಲು ಏಪ್ರಿಲ್ 24 ಕಡೆಯ ದಿನವಾಗಿದೆ.
ಮೇ 10 ರಂದು ಬುಧವಾರ ಒಂದೇ ಹಂತದಲ್ಲಿ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ.
ರಾಜ್ಯದಲ್ಲಿ ಒಟ್ಟು 5.24 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲು ಅವಕಾಶ ಪಡೆದಿದ್ದಾರೆ.