ವಿಧಾನಸಭೆ ಚುನಾವಣೆಗೆ ನಾಳೆ ಅಧಿಸೂಚನೆ ಪ್ರಕಟ: ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭ

Prasthutha|

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ–2023ಕ್ಕೆ ನಾಳೆ ಅಧಿಕೃತವಾಗಿ ಅಧಿಸೂಚನೆ ಹೊರಬೀಳಲಿದ್ದು, ನಾಳೆಯಿಂದಲೇ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಲಿದೆ.

- Advertisement -


ಗುರುವಾರದಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಲಿದ್ದು ಒಟ್ಟು ಏಳು ದಿನ ಕಾಲಾವಕಾಶವಿದೆ. ಏ.20 ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ.


ಏಪ್ರಿಲ್ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು ನಾಮಪತ್ರ ವಾಪಸ್ ಪಡೆಯಲು ಏಪ್ರಿಲ್ 24 ಕಡೆಯ ದಿನವಾಗಿದೆ.

- Advertisement -


ಮೇ 10 ರಂದು ಬುಧವಾರ ಒಂದೇ ಹಂತದಲ್ಲಿ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ.
ರಾಜ್ಯದಲ್ಲಿ ಒಟ್ಟು 5.24 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲು ಅವಕಾಶ ಪಡೆದಿದ್ದಾರೆ.

Join Whatsapp