September 25, 2021

ಮೋದಿ ಪ್ರವಾಸ ವಿರುದ್ಧ ವೈಟ್‌ ಹೌಸ್‌ ಮುಂದೆ ಪ್ರತಿಭಟಿಸಿದ ಅನಿವಾಸಿ ಭಾರತೀಯರು

ನ್ಯೂಯಾರ್ಕ್: ಅಮೆರಿಕ ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅಮೆರಿಕದ ವೈಟ್‌ ಹೌಸ್‌ ಎದುರು ಹಲವಾರು ಅನಿವಾಸಿ ಭಾರತೀಯರು ಪ್ರತಿಭಟನೆ ಮಾಡಿದ್ದಾರೆ.

 ‘ಫಾಸಿಸಂ ತೊಲಗಿಸಿ ಭಾರತವನ್ನು ರಕ್ಷಿಸಿ’ ಎಂಬ ಫಲಕಗಳನ್ನು ಹಿಡಿದು ವೈಟ್‌ ಹೌಸ್‌ ಎದುರಿನ ಲಾಫಯೆಟೆ ಚೌಕ ಉದ್ಯಾನದಲ್ಲಿ ಸೇರಿದ ಪ್ರತಿಭಟನಾಕಾರರು ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.  ಮೋದಿ ಅಧಿಕಾರವಧಿಯಲ್ಲಿ ಮುಸ್ಲಿಂ ಹಾಗೂ ಇತರೆ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಕಿರುಕುಳ ಹೆಚ್ಚಾಗಿದೆ. ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ಮುಖ್ಯವಾಗಿ 20 ಕೋಟಿ ಮುಸ್ಲಿಮರು ಹಾಗೂ ಅಲ್ಪಸಂಖ್ಯಾತ ಸಮುದಾಯಗಳಿಗೆ ತಾರತಮ್ಯ ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!