NSE ಹಗರಣ | ಹಲವು ನಗರದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ಸಿಬಿಐ

Prasthutha|

ನವದೆಹಲಿ: NSE ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ಸಂಸ್ಥೆ (ಸಿಬಿಐ) ಇಂದು ಹಲವು ನಗರಗಳ 10ಕ್ಕೂ ಅಧಿಕ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಈ ಹಗರಣದಲ್ಲಿ ಸಿಬಿಐ ಮುಂಬೈ, ಗಾಂಧಿನಗರ, ದೆಹಲಿ, ನೋಯ್ಡಾ, ಗುರ್ಗಾಂವ್ ಮತ್ತು ಕೋಲ್ಕತ್ತಾದ ಇತರೆ ನಗರಗಳಲ್ಲಿ 12ಕ್ಕೂ ಅಧಿಕ ಸಂಸ್ಥೆಗಳನ್ನು ಕೇಂದ್ರೀಕರಿಸಿ ಶೋಧ ಕಾರ್ಯಾಚರಣೆ ನಡೆಸಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಸದ್ಯ ರಾಷ್ಟ್ರೀಯ ಷೇರು ವಿನಿಮಯ (NSE) ಕೇಂದ್ರದ ಮಾಜಿ ಸಿಇಒ ಮತ್ತು ವ್ಯವಸ್ಥಾಪಕಿ ಚಿತ್ರಾ ರಾಮಕೃಷ್ಣ ಮತ್ತು ಗ್ರೂಪ್ ಅಪರೇಟಿಂಗ್ ಆಫೀಸರ್ ಆನಂದ್ ಸುಬ್ರಮಣಿಯನ್ ವಿರುದ್ಧ ಕೇಂದ್ರ ತನಿಖಾ ಸಂಸ್ಥೆ (ಸಿಬಿಐ) ಚಾರ್ಚ್ ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ದೆಹಲಿ ಮೂಲದ ಒಪಿಜಿ ಸೆಕ್ಯುರಿಟೀಸ್ ಪ್ರೈವೇಟ್ ಲಿಮಿಟೆಡ್‌ನ ಮಾಲೀಕರು, ಸ್ಟಾಕ್ ಬ್ರೋಕರ್ ಸಂಜಯ್ ಗುಪ್ತಾ ಅವರ ವಿರುದ್ಧ 2018 ರಲ್ಲಿ ಸ್ಟಾಕ್ ಮಾರ್ಕೆಟ್ ಟ್ರೇಡಿಂಗ್ ಸಿಸ್ಟಮ್‌ಗೆ ಆರಂಭಿಕ ಪ್ರವೇಶವನ್ನು ಪಡೆಯುವ ಮೂಲಕ ಲಾಭ ಗಳಿಸಿದ ಆರೋಪದಲ್ಲಿ ಕೇಂದ್ರ ತನಿಖಾ ಸಂಸ್ಥೆ ಪ್ರಕರಣ ದಾಖಲಿಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.



Join Whatsapp