UGC-NET ಪರೀಕ್ಷೆ ರದ್ದು ವಿರುದ್ಧ NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಪ್ರತಿಭಟನೆ

Prasthutha|

ಮಂಗಳೂರು: ಕೇಂದ್ರ BJP ಸರ್ಕಾರದ ಅವ್ಯವಸ್ಥೆಯಿಂದಾಗಿ UGC-NET ಪರೀಕ್ಷೆ ರದ್ದಾಗಿದ್ದು, ಇದರಿಂದಾಗಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಡಕಾಗಿದೆ. ಇದನ್ನು ಖಂಡಿಸಿ‌ NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಮಂಗಳೂರು ಜ್ಯೋತಿ ಅಂಬೇಡ್ಕರ್ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು

- Advertisement -

NTA ನಡೆಸುವ ಕೇಂದ್ರಿಕೃತ NEET ಪರೀಕ್ಷೆಯನ್ನು ರದ್ದುಪಡಿಸಿ, NEET ಪರೀಕ್ಷೆ ನಡೆಸಲು ಆಯಾ ರಾಜ್ಯಗಳಿಗೆ ಸ್ವಾಯತ್ತತೆ ನೀಡಬೇಕೆಂದು ಇದೇ ಸಂದರ್ಭದಲ್ಲಿಆಗ್ರಹಿಸಲಾಯಿತು.

ಪ್ರತಿಭಟನೆಯಲ್ಲಿ NSUI ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷ ಸುಖ್ವಿಂದರ್ ಸಿಂಗ್, ನಜೀಬ್ ಮಂಚಿ, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಕ್ರಿಸ್ಟನ್ ಮಿನೇಜಸ್, ಬಂಟ್ವಾಳ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಸಫ್ವಾನ್ ಸರವು, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ರೋನ್ಸ್ಟನ್ ಸಿಕ್ವೇರಾ,ವಿಶಾಲ್,ಸೋಹಾನ್, ಸೃಜನ್, ಫಾರೂಕ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Join Whatsapp