ಖಡ್ಗದಿಂದ ಕೇಕ್ ಕತ್ತರಿಸಿದ NSUI ಮುಖಂಡನ ಬಂಧನ

Prasthutha|

ಮುಂಬೈ: ಖಡ್ಗದಿಂದ ಹುಟ್ಟುಹಬ್ಬದ ಕೇಕ್ ಕತ್ತರಿಸಿದ ಆರೋಪದ ಮೇಲೆ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ನಗರ ಘಟಕದ ಅಧ್ಯಕ್ಷ ಪ್ರದ್ಯುಮ್ ಯಾದವ್ (25) ಎಂಬಾತನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

- Advertisement -


ಶುಕ್ರವಾರ ಯಾದವ್ ತನ್ನ ಬೆಂಬಲಿಗರೊಂದಿಗೆ ವಿಕ್ರೋಲಿ ರೈಲು ನಿಲ್ದಾಣದ ಬಳಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಆ ಸಮಯದಲ್ಲಿ ಕತ್ತಿಯಂಥ ಆಯುಧದಿಂದ ಕೇಕ್ ಕತ್ತರಿಸಿದ್ದಾರೆ ಎನ್ನಲಾಗಿದೆ. ಈ ಸಂಭ್ರಮಾಚರಣೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ಈ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದ್ದಾರೆ.

Join Whatsapp