Home ಟಾಪ್ ಸುದ್ದಿಗಳು ಲಂಚ ಪ್ರಕರಣ| ಸಚಿವೆ ಶಶಿಕಲಾ ಜೊಲ್ಲೆ ನಿವಾಸದ ಮೇಲೆ ಮೊಟ್ಟೆ ಎಸೆದು ಪ್ರತಿಭಟನೆ

ಲಂಚ ಪ್ರಕರಣ| ಸಚಿವೆ ಶಶಿಕಲಾ ಜೊಲ್ಲೆ ನಿವಾಸದ ಮೇಲೆ ಮೊಟ್ಟೆ ಎಸೆದು ಪ್ರತಿಭಟನೆ

ಬೆಂಗಳೂರು: ಗರ್ಭಿಣಿಯರಿಗೆ ಮತ್ತು ಅಪೌಷ್ಠಿಕ ಮಕ್ಕಳಿಗೆ ನೀಡಲಾಗುವ ‘ಮಾತೃಪೂರ್ಣ’ ಮೊಟ್ಟೆ ವಿತರಿಸುವ ಟೆಂಡರ್ ಪ್ರಕ್ರಿಯೆಯಲ್ಲಿ ಭಾರೀ ಭ್ರಷ್ಟಾಚಾರ ನಡೆಸಲು ಮುಂದಾದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರ ನಿವಾಸದ ಮೇಲೆ NSUI ಕಾರ್ಯಕರ್ತರು ಮೊಟ್ಟೆ ಎಸೆದು ಪ್ರತಿಭಟನೆ ನಡೆಸಿದ್ದಾರೆ.

‘ಮಾತೃಪೂರ್ಣ’ ಯೋಜನೆ ಅಡಿಯಲ್ಲಿ ಮೊಟ್ಟೆ ಹಂಚಿಕೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಭ್ರಷ್ಟಾಚಾರ ನಡೆಸಲು ಮುಂದಾಗಿದ್ದನ್ನು ಖಾಸಗಿ ಸುದ್ದಿವಾಹಿನಿಯೊಂದು ಕುಟುಕು ಕಾರ್ಯಾಚರಣೆ ನಡೆಸಿ ಬಯಲಿಗೆಳೆದಿತ್ತು.

ಸಚಿವೆ ಜೊಲ್ಲೆ ಅವರ ನಿವಾಸದ ಪ್ರವೇಶ ದ್ವಾರಕ್ಕೆ ಪ್ರತಿಭಟನಕಾರರು ಮೊಟ್ಟೆಗಳನ್ನು ಎಸೆದು ಆಕ್ರೋಶ ವ್ಯಕ್ತ ಪಡಿಸಿದ್ದು, ಕೂಡಲೇ ಸಚಿವೆ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ.

ಅಂಗನವಾಡಿ ಮೂಲಕ ವಿತರಿಸಲಾಗುವ ಮೊಟ್ಟೆ ಪೂರೈಕೆ ಟೆಂಡರ್ ಗಾಗಿ ಡೀಲ್ ನಡೆದಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರೇ ಡೀಲ್ ಗೆ ಒಪ್ಪಿಕೊಂಡು 25 ಲಕ್ಷ ರೂ. ನೀಡುವಂತೆ ಸೂಚನೆ ನೀಡಿರುವುದು ಸುದ್ದಿ ವಾಹಿನಿ ನಡೆಸಿದ ಕುಟುಕು ಕಾರ್ಯಾಚರಣೆಯ ರಹಸ್ಯ ಕ್ಯಾಮರಾದಲ್ಲಿ ಸೆರೆಯಾಗಿತ್ತು.

Join Whatsapp
Exit mobile version