ಅತ್ಯಾಚಾರಿಗಳ ಬಂಧನವಾಗದಿದ್ದಲ್ಲಿ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ: NSUI ವಿದ್ಯಾರ್ಥಿಗಳ ಎಚ್ಚರಿಕೆ

Prasthutha|

ಬೆಂಗಳೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿದ್ಯಾರ್ಥಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮಾಡಿರುವ ಅತ್ಯಾಚಾರಿಗಳನ್ನು ನಾಳೆ ಬೆಳಗ್ಗಿನವರೆಗೆ ಬಂಧಿಸದಿದ್ದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ಎನ್.ಎಸ್.ಯು.ಐ ವಿದ್ಯಾರ್ಥಿ ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ದೀಪಕ್ ಗೌಡ ಹೇಳಿದ್ದಾರೆ. ‌

- Advertisement -

ಅವರು ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಘಟನೆಯನ್ನು ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಎನ್.ಎಸ್.ಯು.ಐ ನಡೆಸಿದ ಮೊಂಬತ್ತಿ ಪ್ರತಿಭಟನೆ ಸಂದರ್ಭ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಮೇಲಿನ ಹೇಳಿಕೆಯನ್ನು ನೀಡಿದ್ದಾರೆ.

ಮೈಸೂರು ಘಟನೆಯು ದೇಶಕ್ಕೆ ಮತ್ತು ರಾಜ್ಯಕ್ಕೆ ಅವಮಾನ. ರಾಜ್ಯದಲ್ಲಿ ಕಾನೂನು ಇದಿಯಾ ಎಂಬ ಸಂಶಯ ಇದೀಗ ಉಂಟಾಗಿದೆ. ಸ್ವಾತಂತ್ರ್ಯ ಆಚರಿಸುವ ಆಗಸ್ಟ್ ತಿಂಗಳಲ್ಲೇ ವಿದ್ಯಾರ್ಥಿಯ ಮೇಲೆ ಅತ್ಯಾಚಾರವಾಗಿದೆ ಎಂದರೆ ಸ್ವಾತಂತ್ರ್ಯ ನಿಜವಾಗಿಯೂ ಸಿಕ್ಕಿದೆಯಾ ಎಂದು ಪ್ರಶ್ನಿಸಿದ್ದಾರೆ. ಉತ್ತರ ಪ್ರದೇಶದಲ್ಲಾಗುವ ದೌರ್ಜನ್ಯ, ದಬ್ಬಾಳಿಕೆ, ಕೋಮುಗಲಭೆ ಮತ್ತು ಅತ್ಯಾಚಾರಗಳು ಕರ್ನಾಟಕದಲ್ಲೂ ಮರುಕಳಿಸುತ್ತದೆ. ಮುಖ್ಯಮಂತ್ರಿ ಮತ್ತು ಇತರರು ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ವಿನಹಃ ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಗಮನ ಕೊಡುತ್ತಿಲ್ಲ. ಸರಕಾರ ಸಂಪೂರ್ಣವಾಗಿ ವಿಫಲಗೊಂಡಿದೆ. ಸರಕಾರ ತಕ್ಷಣ ಆರೋಪಗಳನ್ನು ಬಂಧಿಸದಿದ್ದಲ್ಲಿ ಮುಖ್ಯಮಂತ್ರಿಯ ನಿವಾಸಕ್ಕೆ ನಾಳೆ (ಶುಕ್ರವಾರ) ಬೆಳಿಗ್ಗೆ ಮುತ್ತಿಗೆ ಹಾಕುತ್ತೇವೆ ಮತ್ತು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತೇವೆ ಎಂದು ದೀಪಕ್ ಗೌಡ ಎಚ್ಚರಿಕೆ ನೀಡಿದ್ದಾರೆ.

Join Whatsapp