ತುಮಕೂರು: ಪಠ್ಯಪರಿಷ್ಕರಣೆಯಲ್ಲಿ ಸಮಾಜ ಸುಧಾರಕರ ಪಾಠವನ್ನು ಕೈಬಿಡಲಾಗಿದೆ ಎಂದು ಆರೋಪಿಸಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ನಿವಾಸದ ಎದುರು ಆರೆಸ್ಸೆಸ್ ಚೆಡ್ಡಿಗೆ ಬೆಂಕಿ ಹಚ್ಚಿ ಪ್ರತಿಭಟಿಸಿದ ಕಾರಣಕ್ಕೆ ಜೈಲುಪಾಲಾಗಿದ್ದ ಎನ್ ಎಸ್ ಯುಐ ಕಾರ್ಯಕರ್ತರಿಗೆ ತುಮಕೂರು ಸ್ಥಳೀಯ ನ್ಯಾಯಾಲಯವೊಂದು ಜಾಮೀನು ನೀಡಿದೆ.
ಜೂನ್.1 ರಂದು ತುಮಕೂರು ಜಿಲ್ಲೆಯ ತಿಪಟೂರಿನಲ್ಲಿರುವಂತ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮನೆಯ ಎದುರು ಎನ್ ಎಸ್ ಯು ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಪಠ್ಯಪುಸ್ತಕ ಪರಿಷ್ಕರಣೆ ವಿವಾದದ ಬಗ್ಗೆ ಕಿಡಿಕಾರಿದ್ದರು. ಅಲ್ಲದೇ ಆರ್ ಎಸ್ ಎಸ್ ಚಡ್ಡಿಯನ್ನು ಸುಟ್ಟು ಹಾಕಿದ್ದರು.
ಪ್ರಕರಣ ಸಂಬಂಧ ತುಮಕೂರಿನ ಜೆ ಎಂ ಎಫ್ ಸಿ ನ್ಯಾಯಾಲಯಕ್ಕೆ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು, ಎನ್ ಎಸ್ ಯು ಅಧ್ಯಕ್ಷ ಕೀರ್ತಿ ಗಣೇಶ್ ಸೇರಿದಂತೆ 24 ಜನರಿಗೆ ಜಾಮೀನು ಮಂಜೂರು ಮಾಡಿದೆ. ನಾಳೆ ತುಮಕೂರಿನ ಸೆಂಟ್ರಲ್ ಜೈಲಿನಿಂದ ಬಿಡುಗಡೆ ಆಗುವ ಸಾಧ್ಯತೆ ಇದೆ.