ಶಿವಮೊಗ್ಗ ಹತ್ಯೆ ಪ್ರಕರಣ | ಮತ್ತಿಬ್ಬರು ಪೊಲೀಸರ ವಶಕ್ಕೆ: ಬಂಧಿತರ ಸಂಖ್ಯೆ 5ಕ್ಕೆ ಏರಿಕೆ

Prasthutha|

ಶಿವಮೊಗ್ಗಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು  ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

- Advertisement -

ಮೂವರು ಆರೋಪಿಗಳನ್ನು ನಿನ್ನೆಯೇ ಬಂಧಿಸಲಾಗಿತ್ತು. ಹಾಗಾಗಿ, ಪ್ರಕರಣದಲ್ಲಿ ಈವರೆಗೆ 5 ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಶಿವಮೊಗ್ಗ ನಗರದ ಭಾರತಿ ಕಾಲೋನಿ ಬಳಿ ರವಿವಾರ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹರ್ಷನನ್ನು ಕೊಲೆ ಮಾಡಿದ್ದರು. ಕೊಲೆ ಪ್ರಕರಣದಲ್ಲಿ 7 ಮಂದಿಯ ಕೈವಾಡವಿರುವ ಬಗ್ಗೆ ಪೊಲೀಸರು ಶಂಕಿಸಿದ್ದಾರೆ.

Join Whatsapp