ನವದೆಹಲಿ: ಪ್ರವಾದಿ ಮುಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿ ನಾಯಕಿ ನೂಪುರ್ ಶರ್ಮಾ ನೂಪುರ್ ಶರ್ಮಾ ವಿರುದ್ಧ ದಾಖಲಾದ ಎಲ್ಲಾ ಎಫ್ಐಆರ್ ಗಳನ್ನು ಒಟ್ಟುಗೂಡಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ನಿರ್ದೇಶಿಸಿದ್ದು, ತನಿಖೆ ನಡೆಸಲು ದೆಹಲಿ ಪೊಲೀಸರಿಗೆ ಆದೇಶಿಸಿದೆ.
“ಈ ನ್ಯಾಯಾಲಯವು ಈಗಾಗಲೇ ಅರ್ಜಿದಾರರ ಜೀವ ಮತ್ತು ಭದ್ರತೆಗೆ ಗಂಭೀರ ಬೆದರಿಕೆಯನ್ನು ಪರಿಗಣಿಸಿರುವುದರಿಂದ, ನೂಪುರ್ ಶರ್ಮಾ ವಿರುದ್ಧದ ಎಲ್ಲಾ ಎಫ್ಐಆರ್ ಗಳನ್ನು ದೆಹಲಿ ಪೊಲೀಸರಿಗೆ ವರ್ಗಾಯಿಸಲು ಮತ್ತು ತನಿಖೆಗಾಗಿ ಒಟ್ಟುಗೂಡಿಸಲು ನಾವು ನಿರ್ದೇಶಿಸುತ್ತೇವೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.